09/06/2025 4:53 PM

Translate Language

Home » ಲೈವ್ ನ್ಯೂಸ್ » ರಾಜ್ಯದಲ್ಲಿ ಜಿಲ್ಲಾ, ತಾಲ್ಲೂಕು ಪಂಚಾಯ್ತಿ, ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆ.!

ರಾಜ್ಯದಲ್ಲಿ ಜಿಲ್ಲಾ, ತಾಲ್ಲೂಕು ಪಂಚಾಯ್ತಿ, ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆ.!

Facebook
X
WhatsApp
Telegram

ಬೆಂಗಳೂರು.14/ಜ/25.ರಾಜ್ಯದಲ್ಲಿ ಪಂಚಾಯತಿ ಚುನಾವಣೆ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಮಾಡ್ಬೇಕು ಅಂತ ಚುನಾವಣಾ ಆಯೋಗ ನಿರ್ಧಾರ ಕೈಗೊಂಡಿದೆ.

ಏಪ್ರಿಲ್ ಮೇ ತಿಂಗಳಲ್ಲಿ ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ, ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವುದು ಬಾಕಿ ಇದೆ. ಈ ಚುನಾವಣೆಗೆ ಈಗ ಮುಹೂರ್ತ ಫಿಕ್ಸ್ ಆದಂತೆ ಆಗಿದೆ. ಜಿಲ್ಲಾ, ತಾಲ್ಲೂಕು ಪಂಚಾಯ್ತಿಗೆ ಏಪ್ರಿಲ್ ಒಳಗೆ, ಸ್ಥಳೀಯ ಸಂಸ್ಥೆಗಳಿಗೆ ಏಪ್ರಿಲ್, ಮೇ ಒಳಗೆ ಚುನಾವಣೆ ನಡೆಯೋದು ಖಚಿತವಾಗಿದೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿರುವಂತ ರಾಜ್ಯ ಚುನಾವಣಾ ಆಯುಕ್ತ ಸಂಗ್ರೇಶಿ ಅವರು, ಚುನಾವಣಾ ಆಯೋಗದಿಂದ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆಗೆ ತಯಾರಿ, ಸಿದ್ಧತೆ ಮಾಡಿಕೊಳ್ಳಲಾಗಿದೆ. ಏಪ್ರಿಲ್ ಒಳಗೆ ಜಿಲ್ಲಾ, ತಾಲ್ಲೂಕು ಪಂಚಾಯ್ತಿಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ ಎಂದರು.

ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಚುನಾವಣಾ ಪ್ರಕ್ರಿಯೆ ಸಂಬಂಧ ಮತದಾರರ ಪಟ್ಟಿಯ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಅಂತಿಮ ಮತದಾರರ ಪಟ್ಟಿ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆಯ ಮೀಸಲಾತಿ ಪಟ್ಟಿ ಕೈಸೇರಿದ ಬಳಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದರು.

ಏಪ್ರಿಲ್ ಒಳಗೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ನಡೆಯುತ್ತದೆ. ಏಪ್ರಿಲ್, ಮೇ ಒಳಗೆ ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದರು.

ಏಪ್ರಿಲ್ ಮೇ ತಿಂಗಳಲ್ಲಿ ರಾಜ್ಯದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಆಗಿರುತಿದೆ ಚುನಾವಣಾ ನಡ್ಸೋಕೆ ತುಂಬಾ ವಳೆದು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!