ಬೀದರ.17ಜನವರಿ.25:- ಬೀದರ ಜಿಲ್ಲೆಗೆ ಇಂಧನ ಸಚಿವರು ಹಾಗೂ ಚಿಕ್ಕಮಂಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ.ಜಾರ್ಜ್ ಅವರು ಜನವರಿ.23 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.
ಅಂದು ಅವರು ಬೆಳಿಗ್ಗೆ 9.45ಕ್ಕೆ ಬೀದರ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬೆಳಿಗ್ಗೆ 10 ಗಂಟೆಗೆ ಬೀದರ ಜಿಲ್ಲಾ ಕಾಂಗರೆಸ್ ಸಮಿತಿ ಕಚೇರಿಗೆ ಭೇಟಿ ನೀಡಲಿದ್ದಾರೆ. ನಂತರ ಬೆಳಿಗ್ಗೆ 11 ಗಂಟೆಗೆ ಬೀದರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂಧನ ಇಲಾಖೆಯ ವಿಷಯಗಳ ಕುರಿತು ಚರ್ಚಿಸಲು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ಮಧ್ಯಾಹ್ನ 2.15ಕ್ಕೆ ಬೀದರ ವಿಮಾನ ನಿಲ್ದಾಣದ ಮೂಲಕ ಕಲಬುರಗಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.