ಬೀದರ.20.ಜನವರಿ.25:- ಇದೇ ಜನವರಿ.25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ 17 ಮತ್ತು 18 ವರ್ಷಗಳ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜನವರಿ.25 ರಂದು ನಗರದ ಡಾ.ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ Voter APP Helpline ಡೌನಲೋಡ ಮಾಡಿಕೊಂಡು ತಮ್ಮ ಹೆಸರನ್ನು ಸೇರ್ಪಡೆ ಮಾಡಿಕೊಳ್ಳುವಂತೆ ನೋಡಿಕೊಳ್ಳಬೇಕು.
ಪದವಿ ಪೂರ್ವ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸುತ್ತಾ 25 ರಂದು ಸಾರ್ವತ್ರಿಕ ರಜಾ ಇರುವುದರಿಂದ ಜನವರಿ.24 ರಂದು ಶಾಲಾ ಕಾಲೇಜುಗಳಲ್ಲಿ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿ ಜನವರಿ.25 ರಂದು ನಡೆಯುವ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ನೋಡಿಕೊಳ್ಳಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ, ಹೆಚ್ಚುವರಿ ಪೆÇಲೀಸ್ ವರಿμÁ್ಠಧಿಕಾರಿಗಳಾದ ಚಂದ್ರಕಾಂತ ಪೂಜಾರ, ಸಹಾಯಕ ಆಯುಕ್ತರಾದ ಎಂ.ಡಿ.ಶಕೀಲ್, ರಾಜ್ಯ ಮಟ್ಟದ ಚುನಾವಣಾ ಮಾಸ್ಟರ ಟ್ರೇನರ ಗೌತಮ ಅರಳಿ, ಪದವಿ ಪೂವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಚಂದ್ರಕಾಂತ ಶಾಬಾದಕರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಸಲೀಂ ಪಾಶಾ, ವಿವಿಧ ಕಾಲೇಜಿನ ಪ್ರಾಂಶುಪಾಲರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಚುನಾವಣೆ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.