ಬೀದರ.24.ಜನವರಿ.25:- 2024-25ನೇ ಸಾಲಿಗೆ ಭಾರತ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ತೊಗರಿ ಕಾಳು ಖರೀದಿಗಾಗಿ ಬೀದರ ಜಿಲಾ ಟಾಸ್ಕ್ಫೋರ್ಸ್ ಸಮಿತಿಯು ಬೀದರ ಜಿಲ್ಲೆಯಲ್ಲಿ ಒಟ್ಟು 70 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಬೀದರ ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲಲಿ ತಿಳಿಸಿದ್ದಾರೆ.
ಈ ಖರೀದಿ ಕೇಂದ್ರಗಳು ನಾಫೆಡ್ ಸಂಸ್ಥೆಯಿAದ ಲಾಗಿನ್ ಕ್ರೆಡೆನ್ಸಿಯಲ್ಸ್ ಪಡೆದಿದ್ದು, ತೊಗರಿ ಖರೀದಿಗಾಗಿ ನೋಂದಣಿ ಪ್ರಕ್ರಿಯೇಗೆ ಸರ್ವಸನ್ನದ್ದರಾಗಿದ್ದಾರೆ. ನೋಂದಣಿ ಪ್ರಕ್ರಿಯೇಯು ಇಂದಿನಿAದಲೇ ಪ್ರಾರಂಭವಾಗಲಿದೆ.
ತೊಗರಿ ಬೆಲೆದ ರೈತರು ಎಫ್‌ಎಕ್ಯೂ ಗುಣಮಟ್ಟದ ತೊಗರಿ ಕಾಳನ್ನು ಪ್ರತಿ ಕ್ವಿಂಟಾಲ್‌ಗೆ ರೂ. 7550 ದರದಂತ ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಾಲ್‌ನoತೆ ಹಾಗೂ ಪ್ರತಿ ರೈತರಿಂದ ಗರಿಷ್ಠ 40 ಕ್ವಿಂಟಾಲ್‌ಗಳoತೆ ತೊಗರಿ ಕಾಳನ್ನು ಖರೀದಿ ಕೇಂದ್ರಗಳನ್ನು ಮಾರಾಟ ಮಾಡಬಹುದಾಗಿದೆ. ಆದ್ದರಿಂದ ರೈತರು ತಮ್ಮ ಸಮೀಪದ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊoಡು ಸದರಿ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.