10/06/2025 11:37 AM

Translate Language

Home » ಲೈವ್ ನ್ಯೂಸ್ » ಫೆ.4 ರಂದು ಶ್ರೀ ಸವಿತಾ ಮಹರ್ಷಿ ಜಯಂತ್ಯೂತ್ಸವ ಕಾರ್ಯಕ್ರಮ.!

ಫೆ.4 ರಂದು ಶ್ರೀ ಸವಿತಾ ಮಹರ್ಷಿ ಜಯಂತ್ಯೂತ್ಸವ ಕಾರ್ಯಕ್ರಮ.!

Facebook
X
WhatsApp
Telegram


ಬೀದರ.02.ಫೆ.25:  ಬೀದರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಬೀದರ ಜಿಲ್ಲೆ, ಬೀದರ ಇವರ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ.4 ರಂದು ಮಧ್ಯಾಹ್ನ 12.30 ಗಂಟೆಗೆ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಶ್ರೀ ಸವಿತಾ ಮಹರ್ಷಿ ಜಯಂತ್ಯುತ್ಸವ ಕಾರ್ಯಕ್ರಮ ಜರುಗಲಿದೆ.


ಕಾರ್ಯಕ್ರಮದ ಉದ್ಘಾಟನೆಯನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಮಾಡಲಿದ್ದಾರೆ.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಮ್ ಖಾನ್ ಅವರು ವಹಿಸಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ, ಔರಾದ (ಬಿ) ಶಾಸಕ ಪ್ರಭು ಬಿ.ಚವ್ಹಾಣ, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ, ವಿಧಾನ ಪರಿಷತ್ ಸದಸ್ಯರುಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಡಾ.ಎಂ.ಜಿ.ಮೂಳೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ನಾರಾಯಣರಾವ, ಬೀದರ ನಗರಸಭೆ ಅಧ್ಯಕ್ಷರಾದ ಮಹಮ್ಮದ ಗೌಸ, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಜಾಬಶೆಟ್ಟಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸವನ್ನು ಬೀದರ ಜ್ಞಾನ ಸುಧಾ ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ಗಿರಿಧರ ಬಿ.ಎಚ್. ಅವರು ನೀಡಲಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!