09/06/2025 11:30 AM

Translate Language

Home » ಲೈವ್ ನ್ಯೂಸ್ » ಅತಿಥಿ ಶಿಕ್ಷಕರ ಪ್ರತಿಭಟನೆ ಫೆ. 18ರಿಂದ

ಅತಿಥಿ ಶಿಕ್ಷಕರ ಪ್ರತಿಭಟನೆ ಫೆ. 18ರಿಂದ

Facebook
X
WhatsApp
Telegram

ಬೆoಗಳೂರು.04.ಫೆ.25:- ರಾಜ್ಯದಲ್ಲಿ 2025-26ನೇ ಶೈಕ್ಷಣಿಕ ವರ್ಷದಿಂದ ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಕಡ್ಡಾಯವಾಗಿ ಮೆರಿಟ್‌ ಪದ್ಧತಿಯನ್ನು ಕೈಬಿಟ್ಟು ಸೇವಾ ಹಿರಿತನಕ್ಕೆ ಆದ್ಯತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫೆಬ್ರುವರಿ 18ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಅತಿಥಿ ಶಿಕ್ಷಕರ ಸಂಘ ತಿಳಿಸಿದೆ.

ಮಹಿಳಾ ಶಿಕ್ಷಕರಿಗೆ ಗೌರವಧನದ ಜೊತೆಗೆ ಹೆರಿಗೆ ರಜೆ ನೀಡುವುದು ಹಾಗೂ ಎಲ್ಲ ಅತಿಥಿ ಶಿಕ್ಷಕರಿಗೆ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಬೇಕು.

ಶಿಕ್ಷಕರ ಹುದ್ದೆಗಳ ನೇಮಕಾತಿ ಸಂದರ್ಭದಲ್ಲಿ ವಯಸ್ಸಿನ ಹಿರಿತನಕ್ಕೆ ಆದ್ಯತೆ ನೀಡಿ, ನಮ್ಮನ್ನು ಆಯ್ಕೆ ಮಾಡಿಕೊಳ್ಳಬೇಕು.

ಸರ್ಕಾರಿ ಶಿಕ್ಷಕರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ನಮಗೂ ಸಿಗುವಂತಾಗಬೇಕು. ದೆಹಲಿ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಸೇವಾ ಹಿರಿತನ ಆಧಾರದ ಮೇಲೆ ಶಿಕ್ಷಕರನ್ನು ಕಾಯಂಗೊಳಿಸಲಾಗಿದೆ.

ಅದರಂತೆ ನಮ್ಮ ರಾಜ್ಯದಲ್ಲಿಯೂ ಸೇವಾ ಹಿರಿತನದ ಆಧಾರದ ಮೇಲೆ ಅತಿಥಿ ಶಿಕ್ಷಕರನ್ನು ಕಾಯಂಗೊಳಿಸಬೇಕು’ ಎಂದು ಒತ್ತಾಯಿಸಿದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!