09/06/2025 2:29 AM

Translate Language

Home » ಲೈವ್ ನ್ಯೂಸ್ » ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಯೆಲ್ಲಿ ‘₹4,500 ಕೋಟಿ ಮೊತ್ತದ ಕ್ರಿಯಾ ಯೋಜನೆ ತಯಾರ.!

ಕಲ್ಯಾಣ ಕರ್ನಾಟಕ  ಪ್ರದೇಶಾಭಿವೃದ್ಧಿಯೆಲ್ಲಿ ‘₹4,500 ಕೋಟಿ ಮೊತ್ತದ ಕ್ರಿಯಾ ಯೋಜನೆ ತಯಾರ.!

Facebook
X
WhatsApp
Telegram

ಕಲಬುರಗಿ.10.ಫೆ.25:-ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯು (ಕೆಕೆಆರ್‌ಡಿಬಿ) ಈ ಬಾರಿ ₹ 4500 ಕೋಟಿ ಅನುದಾನದ ಕ್ರಿಯಾ ಯೋಜನೆ ತಯಾರಿಸಿದ್ದು, ಒಂದು ತಿಂಗಳಲ್ಲಿ ಎಸ್‌ಸಿಪಿ-ಟಿಎಸ್‌ಪಿ ಮೀಸಲು ಅನುದಾನದ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುವುದು’ ಎಂದು ಮಂಡಳಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಹೇಳಿದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಕೆಆರ್‌ಡಿಬಿ) ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಡುಗಡೆಯಾದ ಅನುದಾನ ಖರ್ಚೇ ಆಗುವುದಿಲ್ಲ ಎಂಬ ಆಪಾದನೆ ಇತ್ತು. ಸಿಬ್ಬಂದಿ ಕೊರತೆಯ ನಡುವೆಯೂ ಬೇರೆ- ಬೇರೆ ಇಲಾಖೆಗಳ ನೆರವು ಪಡೆದ ಕ್ರಿಯಾ ಯೋಜನೆಗಳನ್ನು ತಯಾರಿಸಿದ್ದೇವೆ.

ಈ ವರ್ಷದ ಬಜೆಟ್‌ನಲ್ಲಿಯೂ ₹ 5 ಸಾವಿರ ಕೋಟಿ ಅನುದಾನ ಘೋಷಿಸುವ ನಿರೀಕ್ಷೆ ಇದೆ’ ಎಂದರು.

‘ನಮ್ಮ ಗ್ರಾಮೀಣ ಭಾಗದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಕೊಡಲು 200 ಕೆಪಿಎಸ್ ಮಾದರಿಯ ಕರ್ನಾಟಕ ಪಬ್ಲಿಕ್ ಶಾಲೆ ಸ್ಥಾಪನೆಗೆ ಚಿಂತನೆ ನಡೆದಿದೆ.

ಮುಂಬರುವ ಬಜೆಟ್‌ನಲ್ಲಿ ಘೋಷಣೆಯಾಗಲಿದೆ. ಸಿಎಸ್‌ಆರ್ ನಿಧಿ ಬಳಸಿಕೊಂಡು ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ನಾಲ್ಕೈದು ಕೆಪಿಎಸ್‌ ಶಾಲೆಗಳನ್ನು ತಲಾ ₹ 5 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು’ ಎಂದು ಹೇಳಿದರು.

‘ಕಲಬುರಗಿಯಲ್ಲಿ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಮಂಡಳಿಯ ₹ 857 ಕೋಟಿ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿತ್ತು. ಅದರಲ್ಲಿ ₹ 439 ಕೋಟಿ ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ನಗರ ಆರೋಗ್ಯ ಉಪ ಕೇಂದ್ರಗಳ ನಿರ್ಮಾಣ, ಕಟ್ಟಡಗಳ ದುರಸ್ತಿ, ಆಂಬುಲೆನ್ಸ್‌ಗಳ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ’ ಎಂದರು.

ಆರೋಗ್ಯ ಉಪ ಕೇಂದ್ರಗಳ ನಿರ್ಮಾಣ, ಕಟ್ಟಡಗಳ ದುರಸ್ತಿ, ಆಂಬುಲೆನ್ಸ್‌ಗಳ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ’ ಎಂದರು.

ಕೆಕೆಆರ್‌ಡಿಬಿ ಕಾರ್ಯದರ್ಶಿ ಸುಂದರೇಶ ಬಾಬು ಎಂ. ಉಪಸ್ಥಿತರಿದ್ದರು.

ಡಾ.ಅಜಯ್ ಸಿಂಗ್ ಕೆಕೆಆರ್‌ಡಿಬಿ ಅಧ್ಯಕ್ಷಮಂಡಳಿಗೆ ಅನುದಾನವನ್ನು ಸಂಪೂರ್ಣವಾಗಿ ಖರ್ಚು ಮಾಡಲು ಪ್ರತ್ಯೇಕವಾಗಿ 229 ಎಂಜಿನಿಯರ್‌ ಒಳಗೊಂಡ ಎಂಜಿನಿಯರಿಂಗ್ ವಿಭಾಗ ಸ್ಥಾಪನೆ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಲಾಗಿದೆ. ಖಾಲಿ ಹುದ್ದೆಗಳ ಭರ್ತಿಗೂ ಕ್ರಮ ವಹಿಸಲಾಗುವುದು

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!