09/06/2025 10:06 PM

Translate Language

Home » ಲೈವ್ ನ್ಯೂಸ್ » ಭಾಲ್ಕಿ|ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ.!

ಭಾಲ್ಕಿ|ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ.!

Facebook
X
WhatsApp
Telegram

ಭಾಲ್ಕಿ.14.ಫೆ.25:- ಭಾಲ್ಕಿ ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ  ಅವರು ರಸ್ತೆಗಳು ನಮ್ಮ ಅಭಿವೃದ್ಧಿಯನ್ನು ಬಿಂಬಿಸುತ್ತವೆ.

ಭಾಲ್ಕಿ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕೆಲಸದ ಜತೆಗೆ ರಸ್ತೆಗಳ ಅಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ತಾಲ್ಲೂಕಿನ ಮೇಥಿ ಮೇಳಕುಂದಾ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ₹4.40 ಕೋಟಿ ವೆಚ್ಚದಲ್ಲಿ ಭಾತಂಬ್ರಾದಿಂದ ಕಾಸರತೂಗಾಂವ ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ತಾಲ್ಲೂಕಿನಲ್ಲಿ ಹಿಂದೆಂದು ಕಾಣದ ರೀತಿಯಲ್ಲಿ ಉತ್ತಮವಾಗಿ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಮುಖ್ಯ ರಸ್ತೆಗಳ ಜತೆಗೆ ಗ್ರಾಮೀಣ ಭಾಗದ ವಿವಿಧೆಡೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳನ್ನು ಮಾದರಿಯಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ತಿಳಿಸಿದರು.

ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಹಣಮಂತರಾವ್ ಚವ್ಹಾಣ, ಮರಾಠಾ ಸಮಾಜದ ಮುಖಂಡ ಜನಾರ್ದನ ಬಿರಾದಾರ, ಮೇಥಿ ಮೇಳಕುಂದಾ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉತ್ತಮಬಾಯಿ ಬಿ, ಭಾತಂಬ್ರಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹಾಂತೇಶ ಪಾಟೀಲ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಕಾಶಿನಾಥ ಲದ್ದೆ, ಪ್ರಥಮ ದರ್ಜೆ ಗುತ್ತಿಗೆದಾರ ರಿಯಾಜಪಾಶಾ, ಮುಸ್ತಾಕ್ ಅಹ್ಮದ್, ದೀಪಕ ಠಮಕೆ ಹಾಜರಿದ್ದರು.

ತಾಲೂಕಿನ ಎಲ್ಲಾ ರಸ್ತೆಗಳು ಉತ್ತಮವಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!