09/06/2025 6:48 PM

Translate Language

Home » ಲೈವ್ ನ್ಯೂಸ್ » ಬೀದರ|ಇಂದು ಉದ್ಯೋಗ ಮೇಳ-2025 ಕಾರ್ಯಕ್ರಮ.!

ಬೀದರ|ಇಂದು ಉದ್ಯೋಗ ಮೇಳ-2025 ಕಾರ್ಯಕ್ರಮ.!

Facebook
X
WhatsApp
Telegram


ಬೀದರ.14.ಫೆಬ್ರುವರಿ.25:-ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಬೀದರ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ರಾಷ್ಟ್ರೀಯ ಗ್ರಾಮಿಣ ಜೀವನೋಪಾಯ ಅಭಿಯಾನ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳುರು ಹಾಗೂ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಕಛೇರಿ ಬೀದರ ಇವರ ಸಹಯೋಗದೊಂದಿಗೆ ಫೆಬ್ರುವರಿ.15 ರಂದು ಬೆಳಿಗ್ಗೆ 9.30 ರಿಂದ ಸಂಜೆ 4 ರವರೆಗೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಆವರಣ ಮನ್ನಳ್ಳಿ ರಸ್ತೆ ಬೀದರದಲ್ಲಿ ಡಿಡಿಯು-ಜಿಕೆವೈ ಮತ್ತು ಸಂಕಲ್ಪ ಯೋಜನೆಯಡಿ ಉದ್ಯೋಗ ಮೇಳ-2025 ಕಾರ್ಯಕ್ರಮ ನಡೆಯಲಿದೆ.


     ಕಾರ್ಯಕ್ರಮದ ಉದ್ಘಾಟನೆಯನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಮಾಡಲಿದ್ದಾರೆ.


     ಕಾರ್ಯಕ್ರಮದ ಘನ ಉಪಸ್ಥಿತಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಡಾ.ಶರಣಪ್ರಕಾಶ ರುದ್ರಪ್ಪ ಪಾಟೀಲ್ ವಹಿಸಲಿದ್ದಾರೆ.

ಅಧ್ಯಕ್ಷತೆಯನ್ನು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸಂಸದರಾದ ಸಾಗರ ಈಶ್ವರ ಖಂಡ್ರೆ, ಔರಾದ (ಬಿ) ಶಾಸಕ ಪ್ರಭು ಬಿ.ಚವ್ಹಾಣ, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ ಹಾಗೂ ವಿಧನ ಪರಿಷತ್ ಸದಸ್ಯರುಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಡಾ.ಎಂ.ಜಿ.ಮೂಳೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾಂತಾ ನಾಯಕ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಾಲಾ ನಾರಾಯಣರಾವ, ಬೀದರ ನಗರಸಭೆ ಅಧ್ಯಕ್ಷ ಮಹ್ಮದ ಗೌಸ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಎಲೆಕ್ಟ್ರಾನಿಕ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆ ಮತ್ತು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ.ಏಕ್‍ರೂಪ್ ಕೌರ್, ಸರ್ಕಾರದ ಕಾರ್ಯದರ್ಶಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ  ರಂದೀಪ್ ಡಿ., ಬೆಂಗಳುರು ರಾಷ್ಟ್ರೀಯ ಜೀವನೋಪಾಯ ಅಬಿಯಾನನದ ಅಭಿಯಾನ ನಿರ್ದೇಶಕರಾದ ಪಿ.ಐ.ಶ್ರೀವಿದ್ಯಾ, ಬೆಂಗಳುರು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಆಯುಕ್ತರಾದ ರಾಗಪ್ರೀಯಾ ಅವರುಗಳು ಭಾಗವಹಿಸಲಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!