10/06/2025 12:14 AM

Translate Language

Home » ಲೈವ್ ನ್ಯೂಸ್ » ಹಣಕಾಸು ಸಂಸ್ಥೆಗಳು RBI Rules ಚಾಚೂ ತಪ್ಪದೆ ಪಾಲಿಸಬೇಕು-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಹಣಕಾಸು ಸಂಸ್ಥೆಗಳು RBI Rules ಚಾಚೂ ತಪ್ಪದೆ ಪಾಲಿಸಬೇಕು-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

Facebook
X
WhatsApp
Telegram

ಬೀದರ.21ಫೆಬ್ರುವರಿ.25:- ರಾಜ್ಯ ಸರ್ಕಾರ ಫೈನಾನ್ಸಗಳು, ಲೇವಾದೇವಿ ವ್ಯಾಪಾರಸ್ಥರು, ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಗಳು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ, ಫೈನಾನ್ಸಗಳು, ಲೇವಾದೇವಿ ವ್ಯಾಪಾರಸ್ಥರು, ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್‌ಗಳು ನೀಡುವ ಮಾರ್ಗದರ್ಶನಗಳು ಹಾಗೂ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.


ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ, ಮೈಕ್ರೋ ಫೈನಾನ್ಸಗಳು ಸಾಲ ಕೊಡುವ ಮುನ್ನ ಸಾಲಗಾರರ ಕುಟುಂಬದ ಆದಾಯ ಸೇರಿದಂತೆ ಮತ್ತಿತರ ಪೂರ್ವಾಪರಿಗಳನ್ನು ಪರಿಶೀಲನೆಯನ್ನು ಮಾಡಿ, ಅವರ ಆದಾಯದ ಶೇ. 50 ರಷ್ಟು ಮಾತ್ರ ಸಾಲ ನೀಡಬೇಕು, ಆದರೆ, ಅವರು ಸಾಲ ತೆದುಕೊಳ್ಳುವ ಸಾಮರ್ಥ್ಯ ನೋಡದೇ ಸಾಲವನ್ನು ನೀಡಿರುವ ಬಗ್ಗೆ ಕಂಡುಬರುತ್ತಿದೆ. ಇವುಗಳಿಗೆ ಆಸ್ಪದ ನೀಡಬಾರದು.

  • ದೆಹಲಿ ಸಿಎಂ ರೇಖಾ ಗುಪ್ತಾ ಅವರು ‘ಏಕ್ ಪೆಡ್ ಮಾ ಕೆ ನಾಮ್ 2.0’ ಬಿಡುಗಡೆ ಮಾಡಿದರು
    ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು ನೆಡುವ ಗುರಿಯನ್ನು ದೆಹಲಿ ಸರ್ಕಾರ ಹೊಂದಿದೆ ಎಂದು ಹೇಳಿದರು. ಏಕ್ ಪೆಡ್ ಮಾ ಕೆ ನಾಮ್ ಉಪಕ್ರಮದಡಿಯಲ್ಲಿ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಇಂದು ನವದೆಹಲಿಯ ಶಾಲಿಮಾರ್ ಬಾಗ್‌ನಲ್ಲಿರುವ ಸರ್ಕಾರಿ ಶಾಲೆಯಲ್ಲಿ ತಮ್ಮ ತಾಯಿಯ ನೆನಪಿಗಾಗಿ ಸಿಂಧೂರ ಗಿಡವನ್ನು ನೆಟ್ಟರು. ದೆಹಲಿ ಶಿಕ್ಷಣ ಇಲಾಖೆ ಮತ್ತು ಶಾಲೆಗಳು ‘ಏಕ್ ಪೆಡ್ ಮಾ ಕೆ ನಾಮ್’ ನ ಎರಡನೇ ಸರಣಿಯಲ್ಲಿ ಭಾಗವಹಿಸುತ್ತಿವೆ ಎಂದು ಶ್ರೀಮತಿ ಗುಪ್ತಾ ಹೇಳಿದರು. ಹಿಂದಿನ ಸರ್ಕಾರವು ದೆಹಲಿ ಸರ್ಕಾರದ ವೇದಿಕೆಯ ಮೂಲಕ ಈ ಯೋಜನೆಯನ್ನು ಎಂದಿಗೂ ಮುಂದಕ್ಕೆ ತೆಗೆದುಕೊಂಡು ಹೋಗಲಿಲ್ಲ ಎಂದು ಅವರು ಆರೋಪಿಸಿದರು.
  • ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ
    ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00 ಗಂಟೆಗೆ ಜಿಲ್ಲಾ ಪತ್ರಿಕಾ ಭವನದಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರು, ಮಾಜಿ ಕೇಂದ್ರ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ಜನಪ್ರತಿನಿಧಿಗಳು ಹಾಗೂ ಪದಾಧಿಕಾರಿಗಳು, ಜಂಟಿ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡುವರು. ಆದ ಕಾರಣ ಮುದ್ರಣ ಹಾಗೂ ದೃಶ್ಯ ಮಾಧ್ಯಮದವರು ಸರಿಯಾದ ಸಮಯಕ್ಕೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಳ್ಳಲು ವಿನಂತಿ.
  • ೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ
    ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ – ರಾಜಶೇಖರ ಜವಳೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಗುವುದರೊಂದಿಗೆ ಮಾನಸಿಕ ಒತ್ತಡಗಳು ಕಡಿಮೆಯಾಗಿ ಏಕಾಗ್ರತೆ ಚಿತ್ತತೆಗೆ ಸಹಕಾರಿಯಾಗುತ್ತದೆ. ಪ್ರತಿಯೋರ್ವ ಕ್ರೀಡಾಪಟುಗಳು ಓದಿನೊಂದಿಗೆ ನಿತ್ಯ ಒಂದು ತಾಸು ಆಟಗಳನ್ನು ಆಡಬೇಕು ಎಂದು ಬೀದರ ಜಿಲ್ಲಾ ಟೇಬಲ್ ಟೆನ್ನಿಸ್ ಸಂಘದ ಅಧ್ಯಕ್ಷ ರಾಜಶೇಖರ ಬಸವಣಪ್ಪ ಜವಳೆ ಅವರು ತರಬೇತಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಬೀದರ ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬೀದರ ಜಿಲ್ಲಾ ಟೇಬಲ್ ಟೆನ್ನಿಸ್ ಸಂಘದ ಸಂಯುಕ್ತಾಶ್ರಯದಲ್ಲಿ ೨೦೨೫-೨೬ನೇ ಸಾಲಿನ ಬೇಸಿಗೆ ಕ್ರೀಡಾ ತರಬೇತಿ ಶಿಬಿರದ ಸಮಾರೋಪ ಸಮಾರಂಬದಲ್ಲಿ ಪ್ರಮಾಣ ಪತ್ರಗಳನ್ನು ವಿತರಿಸಿ ಮಾತನಾಡುತಿದ್ದರು. ಮುಂದುವರೆದು ಮಾತನಾಡಿದ ಅವರು ಈ ತರಬೇತಿಯಲ್ಲಿ ೧೬ ಜನ ವಿದ್ಯಾರ್ಥಿ-ವಿದ್ಯಾರ್ಥಿನಿಯರುಗಳಿಗೆ ಅಥ್ಲೆಟಿಕ್, ವಾಲಿಬಾಲ್, ಬಾಸ್ಕೇಟ್ ಬಾಲ್, ಹಾಕಿ, ಬ್ಯಾಡ್ಮಿಂಟಿನ್, ಫುಟಬಾಲ್, ಟೇಬಲ್ ಟೆನ್ನಿಸ್ ಕ್ರೀಡೆಗಳ ತರಬೇತಿ ನೀಡಲಾಯಿತು….
  • ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ
    ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ (ಜೂ.12 ರಿಂದ 13 ರವರೆಗೆ) ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತ ರೈತರು ತರಬೇತಿಗೆ ಹಾಜರಾಗುವ ಸಮಯದಲ್ಲಿ ಆಧಾರಕಾರ್ಡ್ ಪ್ರತಿ ಹಾಗೂ ಇತ್ತೀಚಿನ ಎರಡು ಭಾವಚಿತ್ರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು, ಆಸಕ್ತರು ಮುಂಚಿತವಾಗಿ ವಾಟ್ಸ್ಪ್ ಮೂಲಕ ತಮ್ಮ ಹೆಸರು ಮತ್ತು ಮೊಬೈಲ ಸಂಖ್ಯೆಯೊoದಿಗೆ ನೋಂದಾಯಿಸಬೇಕು. 40 ರೈತರಿಗೆ ತರಬೇತಿಗೆ ಅವಕಾಶವಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9902561957 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
  • ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ
    ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಅರಿವು ಶೈಕ್ಷಣಿಕ ಸಾಲ ಯೋಜನೆ, (ಹೊಸದು/ನವೀಕರಣ), ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಸಹಾಯಧನ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸಹಾಯಧನ/ಸಾಲ ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಹರು ಸೇವಾಸಿಂಧು ಪೋರ್ಟಲ್  http://sevasindhu.karnataka.gov.in   ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ, ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಕೇಂದ್ರಗಳಲ್ಲಿ ಅನ್‌ಲೈನ್‌ನಲ್ಲಿ ಅರ್ಜಿಗಳನ್ನು ದಿನಾಂಕ: 04-07-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್  http://ambigaradevelopment.karnataka.gov.in     ದಲ್ಲಿ ಅಥವಾ ನಿಗಮದ ದೂರವಾಣಿ ಸಂಖ್ಯೆ 080-22864099 ಗೆ ಸಂಪರ್ಕಿಸುವುದು. ಅಥವಾ ಜಿಲ್ಲಾ ವ್ಯವಸ್ಥಾಪಕರು, ಅ/o ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ…

ಸಾಲ ನೀಡುವವರು ಹಾಗೂ ತೆಗೆದುಕೊಳ್ಳುವವರು ಇಬ್ಬರೂ ಸಹ ಆರ್ಥಿಕ ಶಿಸ್ತನ್ನು ಪಾಲಿಸಬೇಕು ಎಂದರು.


ಆರ್.ಬಿ.ಐ ಮಾರ್ಗಸೂಚಿಯ ಪ್ರಕಾರ ಮೈಕ್ರೋ ಫೈನಾನ್ಸಗಳು ರೂ. 3 ಲಕ್ಷದವರೆಗೆ ಮಾತ್ರ ಸಾಲ ನೀಡಲು ಅವಕಾಶವಿದೆ. ಸಾಲ ಮರುಪಾವತಿಯನ್ನು ಕಾನೂನಿನ ಅನ್ವಯ ಕ್ರಮಗಳನ್ನು ಕೈಗೊಳ್ಳಬೇಕು, ಕಾನೂನನ್ನು ಉಲ್ಲಂಘಿಸಿ, ದೌರ್ಜನ್ಯ, ಕೆಟ್ಟ ಪದಗಳಲ್ಲಿ ಬೈಯುವುದು, ದಬ್ಬಾಳಿಕೆ ಕಿರುಕುಳ ನೀಡುವುದು ಮಾಡಿದ್ದಲ್ಲಿ ಅಂತಹವರ ವಿರುದ್ಧ ಪೋಲೀಸ್‌ನವರು ಪ್ರಕರಣ ದಾಖಲಿಸಿಕೊಳ್ಳಲು ಅವಕಾಶವಿದೆ ಎಂದರು.


ಜಿಲ್ಲೆಯಲ್ಲಿ ಸುಮಾರು ರೂ. 1193 ಕೋಟಿ ಸಾಲ 1.79 ಸಾವಿರ ಜನರಿಗೆ ಸಾಲ ವಿತರಣೆ ಮಾಡಲಾಗಿದೆ. ಸಾಲ ವಸೂಲಾತಿಗಾಗಿ ಫೈನಾನ್ಸ್ ಕಂಪನಿಗಳು ಬೆಳಿಗ್ಗೆ 9 ಕ್ಕೂ ಮುನ್ನ ಸಂಜೆ 5ರ ನಂತರ ಸಾಲಗಾರರ ಮನೆಗೆ ಹೋಗಬಾರದು ಹಾಗೂ ಯವುದೇ ರೀತಿಯ ದೌರ್ಜನ್ಯಗಳನ್ನು ನಡೆಸಬಾರದು. ಒಂದೊಮ್ಮೆ ಉಲ್ಲಂಘಿಸಿದ್ದಲ್ಲಿ ಅಂತವರ ಮೇಲೆ ಕಾನೂನಿನ ಅಡಿಯಲ್ಲಿ ಕ್ರಮ ಕೈಕೊಳ್ಳಲಾಗುವುದೆಂದರು.


ಇ-ಖಾತಾ ಅಭಿಯಾನ: ಬೀದರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತಾ ನೀಡುವ ಅಭಿಯಾನಕ್ಕೆ ಈಗಾಗಲೇ ಚಾಲನೆ ನೀಡಿದ್ದು, ಈ ಅಭಿಯಾನವನ್ನು ಮುಂದಿನ 3 ತಿಂಗಳ ಒಳಗಾಗಿ ಪೂರ್ಣಗೊಳಿಸಲು ಸಾರ್ವಜನಿಕರಿಗೆ ಅಗತ್ಯ ಮಾಹಿತಿ ನೀಡಿ, ನಿಗದಿತ ಕಾಲವಾಧಿಯಲ್ಲಿ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದರು.


ಸಾರ್ವಜನಿಕರಿಗೆ ತಮ್ಮ ಸ್ವತ್ತಿನ ಮಾಹಿತಿಯಲ್ಲಿ ತಿದ್ದು ಪಡಿಗಳಿದ್ದಲ್ಲಿ ಅಗತ್ಯ ದಾಖಲೆಗಳನ್ನು ನಗರ ಸ್ಥಳೀಯ ಸಂಸ್ಥೆಗೆ ಸಲ್ಲಿಸಿ ತಿದ್ದುಪಡಿ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ.

ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿನ ಅನಧಿಕೃತ ಸ್ವತ್ತುಗಳಿಗೆ ಸಹ ಖಾತಾ ನೀಡುವ ಸಂಬಂಧ ಕಾಯ್ದೆ ಮತ್ತು ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದೆ. ಇದರಿಂದ ಅನಧಿಕೃತ ಸ್ವತ್ತುಗಳ ಮಾಲೀಕರು ತಮ್ಮ ಸ್ವತ್ತಿನ ಕಂದಾಯವನ್ನು ಪಾವತಿಸಿ, ಇ-ಖಾತಾ ಪಡೆಯಬಹುದಾಗಿದೆ. ಇದರಿಂದ ಬಹಳ ದಿನಗಳಿಂದ ಇದ್ದ ಅನಧಿಕೃತ ಸ್ವತ್ತುಗಳ ಖಾತಾ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗಿದೆಂದರು.


ಸೆಪ್ಟೆಂಬರ 10, 2024 ರ ಕ್ಕಿಂತ ಮುಂಚಿನ ಆಸ್ತಿಗಳಿಗೆ ಸದರಿ ಕಾಯ್ದೆಯು ಅನ್ವಯವಾಗುತ್ತದೆ. ಸದರಿ ಅಭಿಯಾನವು ಒಂದು ಬಾರಿ ಪರಿಹಾರ ಕ್ರಮವಾಗಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಸದರಿ ಅಭಿಯಾನದ ಸದುಪಯೋಗ ಪಡೆದುಕೊಳ್ಳಲು ಸಾರ್ವಜನಿಕರಿಗೆ ಈ ಸೌಲಭ್ಯದ ಮಾಹಿತಿ ತಲುಪುವಂತೆ ವ್ಯಾಪಕ ಪ್ರಚಾರ ಮಾಡಲಾಗುತ್ತದೆ. ಬೀದರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿ ಲಭ್ಯ ಮಾಹಿತಿಯನ್ನು ಜಾಲತಾಣ http://aasthikanaja.karnatakasmartcity.in/kmf24 ರಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ಈ ಜಾಲತಾಣಕ್ಕೆ ಭೇಟಿ ನೀಡಿ, ತಮ್ಮ ಸ್ವತ್ತಿನ ಮಾಹಿತಿಯು ಸರಿಯಾಗಿರುವ ಕುರಿತು ಪರಿಶೀಲಿಸಬಹುದಾಗಿದೆ ಎಂದರು.


ಸ್ವತ್ತಿನ ಮಾಲೀಕರು ತಮ್ಮ ನಗರ ಸ್ಥಳೀಯ ಸಂಸ್ಥೆಗೆ ಭೇಟಿ ನೀಡಿ, ವಾರ್ಡವಾರು ಆಯೋಜಿಸಲಾಗುವ ಮೇಳಗಳಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ, 07 ದಿನಗಳ ಒಳಗಾಗಿ ಇ-ಖಾತಾ ಪಡೆಯಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಹಾಗೂ ಸಾರ್ವಜನಿಕರ ಸಹಾಯಕ್ಕಾಗಿ ಬೀದರ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಹಾಯವಾಣಿಗಳನ್ನು ಸ್ಥಾಪಿಸಲಾಗಿದೆ. ಇ-ಖಾತಾ ನೀಡಲು ಅಭಿಯಾನ ಕೈಗೊಂಡು ನಿಗದಿತ ಕಾರ್ಯವಿಧಾನವನ್ನು ಅನುಸರಿಸಲಾಗುತ್ತಿದೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತಾ ನೀಡಲು ಬಾಕಿಯಿರುವ ಆಸ್ತಿಗಳ ಗುರುತಿಸುವುದು. ಇ-ಖಾತಾ ಪಡೆಯಲು ಗುರುತಿಸಲಾದ ಆಸ್ತಿಗಳ ಮಾಲೀಕರು ಇ-ಖಾತಾ ಪಡೆಯಲು ಬೇಕಾದ ದಾಖಲೆಗಳನ್ನು ಸಲ್ಲಿಸಲು ಮಾಹಿತಿ ನೀಡಲಾಗುತ್ತದೆ ಎಂದರು.


ಇ-ಖಾತಾ ಅಭಿಯಾನದ ಕುರಿತು ಪ್ರಚಾರ ಮಾಡಲು ನಗರ ಸ್ಥಳೀಯ ಸಂಸ್ಥೆಗಳ ವಾಹನದಲ್ಲಿ ಮುದ್ರಿತ ಧ್ವನಿ (ಆಡಿಯೊ) ಪ್ರಚುರಪಡಿಸಲು, ಲಭ್ಯವಿರುವ ಮೊಬೈಲ್ ಸಂಖ್ಯೆಗಳಿಗೆ ಎಸ್‌ಎಂಎಸ್ ಮೂಲಕ ಮಾಹಿತಿ ನೀಡುವುದು ಮತ್ತು ಇ-ಖಾತಾ ಪಡೆಯಲು ಅವಶ್ಯವಿರುವ ದಾಖಲೆಗಳ ಪಟ್ಟಿಯನ್ನು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರಚುರಪಡಿಸಲು ಸೂಚಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಹೇಳಿದರು.


ಎ-ರಿಜಿಸ್ಟರ್‌ನಲ್ಲಿ ದಾಖಲಿರುವ ಆಸ್ತಿಗಳಿಗೆ ಇ-ಖಾತಾ ಪಡೆಯಲು ನೀಡಬೇಕಾದ ದಾಖಲೆಗಳು: ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ ನೋಂದಾಯಿತ ಮಾರಾಟ ಪತ್ರಗಳು, ದಾನಪತ್ರ, ವಿಭಾಗ ಪತ್ರಗಳು, ಸರ್ಕಾರ ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕು ಪತ್ರ ಇತ್ಯಾದಿಗಳ ಪೈಕಿ ಒಂದು ಪ್ರಮಾಣ ಪತ್ರವನ್ನು, ಮಂಜೂರಾತಿ ಪತ್ರಗಳು, ಕಂದಾಯ ಇಲಾಖೆಯಿಂದ 94 ಸಿಸಿ ಅಡಿ ನೀಡಲಾದ ಹಕ್ಕು ಪತ್ರ ಮತ್ತು ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನಗಳ ಬಿಡುಗಡೆ ಪತ್ರ ಹಾಗೂ ಪ್ರಸಕ್ತ ಸಾಲಿನವರೆಗಿನ ಋಣಭಾರ ಪ್ರಮಾಣ ಪತ್ರ, ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ, ಮಾಲೀಕರ ಫೋಟೋ ಮತ್ತು ಸ್ವತ್ತೀನ ಫೋಟೋ ಮತ್ತು ಮಾಲೀಕರ ಗುರುತಿನ ದಾಖಲೆ ಪ್ರತಿ ಸಲ್ಲಿಸಬೇಕು.


ಬಿ- ರಿಜಿಸ್ಟರ್‌ನಲ್ಲಿ ದಾಖಲಿರುವ ಆಸ್ತಿಗಳಿಗೆ ಇ-ಖಾತಾ ಪಡೆಯಲು ನೀಡಬೇಕಾದ ದಾಖಲೆಗಳು: ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತಪಡಿಸುವ ಸಪ್ಟೆಂಬರ 10, 2024 ರ ಪೂರ್ವದಲ್ಲಿ ನೋಂದಾಯಿತ ಮಾರಾಟ ಪತ್ರಗಳು, ದಾನಪತ್ರ, ವಿಭಾಗ ಪತ್ರಗಳು, ಹಕ್ಕು ಖುಲಾಸೆ ಪತ್ರಗಳು ಹಾಗೂ ಪ್ರಸಕ್ತ ಸಾಲಿನ ವರೆಗೆ ಋಣಭಾರ ಪ್ರಮಾಣ ಪತ್ರ, ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ, ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ, ಮಾಲೀಕರ ಗುರುತಿನ ದಾಖಲೆ ಪ್ರತಿಗಳನ್ನು ಸಲ್ಲಿಸಬೇಕು.

ವ್ಯವಸ್ಥಿತವಾಗಿ ಮತ್ತು ಸಂಘಟಿತ ರೀತಿಯಲ್ಲಿ ಮೇಳಗಳ ಆಯೋಜನೆ: ಇ-ಖಾತಾ ಅಭಿಯಾನದ ಅಂಗವಾಗಿ ನಗರದ ವಾರ್ಡ್ ಅಥವಾ ಬೀದಿಗಳನ್ನು, ಅಪಾರ್ಟ್ಮೆಂಟ್, ಲೇಔಟ್‌ನ್ನು ಗುರುತಿಸಿ, ಆ ಭಾಗದಲ್ಲಿನ ಸಕ್ರಿಯ ನಾಗರೀಕ ಗುಂಪುಗಳು ಅಥವಾ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಸಕ್ರಿಯ ವ್ಯಕ್ತಿಗಳ ಸಹಾಯವನ್ನು ಪಡೆದುಕೊಂಡು, ಇ-ಖಾತಾ ಇಲ್ಲದಿರುವ ಸ್ವತ್ತುಗಳ ಪಟ್ಟಿಯನ್ನು ಅಗತ್ಯ ಸ್ಥಳಗಳಲ್ಲಿ ಪ್ರಚುರಪಡಿಸಲಾಗುವುದೆಂದರು.


ನಾಗರೀಕರಿಗೆ ಅನುಕೂಲವಾಗುವ ಸ್ಥಳಗಳಲ್ಲಿ ಇ-ಖಾತಾ ಮೇಳವನ್ನು ಆಯೋಜಿಸಿ, ಇ-ಖಾತಾ ಪಡೆಯಲು ನಾಗರೀಕರು ಸಲ್ಲಿಸಬೇಕಾದ ಮಾಹಿತಿ, ದಾಖಲೆಗಳ ವಿವರವನ್ನು ತಿಳಿಸಲಾಗುವುದು. ಅಧಿಕೃತ ಸ್ವತ್ತಿನ ಮಾಲೀಕರು ಸಲ್ಲಿಸಬೇಕಾದ ದಾಖಲೆಗಳು, ಮತ್ತು ಅನಧಿಕೃತ ಸ್ವತ್ತಾಗಿದ್ದಲ್ಲಿ ಸಲ್ಲಿಸಬೇಕಾದ ದಾಖಲೆಗಳ ಮಾಹಿತಿಯ ವಿವರವನ್ನು ನಾಗರೀಕರಿಗೆ ಮೇಳದಲ್ಲಿ ನೀಡಲಾಗುವುದು ಎಂದು ಹೇಳಿದರು.


ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಸೂಕ್ತ ಕ್ರಮ: ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಮಾತನಾಡಿ, ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯ 46 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾಗಿದ್ದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.


ಈಗಾಗಲೇ ಎಲ್ಲಾ ಗ್ರಾಮ ಪಂಚಾಯತ ಪಿಡಿಓ ಹಾಗೂ ತಾಲ್ಲೂಕ ಪಂಚಾಯತ ಅಧಿಕಾರಿಗಳ ಸಭೆ ಜರುಗಿಸಿ ಪೂರ್ವ ಸಿದ್ಧತೆ ಕೈಗೊಳ್ಳುವಂತೆ ಸೂಕ್ತ ನಿರ್ದೇಶನ ನೀಡಲಾಗಿದೆಯೆಂದರು. ಕಳೆದ ವರ್ಷ 90 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗಿತ್ತು. 18 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಹಾಗೂ 72 ಬೋರವೆಲ್‌ಗಳ ಮೂಲಕ ನೀರು ಸರಬರಾಜು ಮಾಡಲಾಗಿತ್ತು ಎಂದರು. ಬಹುತೇಕ ಈ ಗ್ರಾಮಗಳು ಔರಾದ, ಭಾಲ್ಕಿ ಹಾಗೂ ಕಮಲನಗರ ತಾಲ್ಲೂಕುಗಳ ವ್ಯಾಪ್ತಿಗೊಳಪಡುತ್ತವೆ ಎಂದರು.


ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ಮಾರ್ಚ.21 ರಿಂದ ಏಪ್ರಿಲ್ 4 ರವರೆಗೆ ಜರುಗಲಿದ್ದು, ಪಾರದರ್ಶಕ ಪರೀಕ್ಷೆ ನಡೆಸಲು ಎಲ್ಲ ಕೇಂದ್ರಗಳಲ್ಲಿ ಸಿಸಿ ಟಿವಿ ವ್ಯವಸ್ಥೆ ಮಾಡಲಾಗಿದ್ದು ವೆಬ್ ಕಾಸ್ಟಿಂಗ್ ಸಹ ನಡೆಯಲಿದೆ. ಕಳೆದ ವರ್ಷ 62% ಫಲಿತಾಂಶ ಹಾಗೂ 30ನೇ ರ‍್ಯಾಂಕ್ ಬಂದಿತ್ತು.

ಈ ಬಾರಿ ಫಲಿತಾಂಶ ಹಾಗೂ ರ‍್ಯಾಂಕ್ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. 20 ಅಂಶಗಳ ಎಲ್ಲ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿದ್ದು ವಿದ್ಯಾರ್ಥಿಗಳಿಗೆ ಸದುಪಯೋಗವಾಗಿದೆ.

ಬೆಳಿಗ್ಗೆ ಹಾಗೂ ಸಂಜೆ ವಿಶೇಷ ತರಗತಿ, ಘಟಕ ಪರೀಕ್ಷೆಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರಸಕ್ತ ಸಾಲಿನ ಪಠ್ಯಕ್ರಮವು ಡಿಸೆಂಬರ್ ಒಳಗೆ ಪೂರ್ಣಗೊಳಿಸಲಾಗಿದ್ದು, 2 ಬಾರಿ ಪುನರಾವಲೋಕನ ನಡೆಸಲಾಗಿದೆ. ಇತರೆ ಕಲಿಕಾಶ್ರಯ ಪುಸ್ತಕ ನೀಡಲಾಗಿದೆ. ಡಯಟ್‌ನಿಂದ ಫೋನ್ ಮೂಲಕ ಮಾರ್ಗದರ್ಶನ ಮಾಡಲಾಗುತ್ತಿದೆ ಎಂದರು.


ಈ ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಚಂದ್ರಕಾಂತ ಪೂಜಾರ, ಬೀದರ ನಗರಾಭಿವೃದ್ಧಿ ಕೋಶದ ಮೋತಿಲಾಲ ಲಮಾಣಿ, ಸಹಕಾರ ಸಂಘಗಳ ಉಪನಿಬಂಧಕರಾದ ಮಂಜುಳಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!