ಬೀದರ.21.ಫೆಬ್ರುವರಿ.25:- ಭಾಲ್ಕಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯಲ್ಲಿ ಫೆಬ್ರುವರಿ.27 ರಂದು ಸಾಯಂಕಾಲ 4 ಗಂಟೆಗೆ ಸಾರಿಗೆ ಅದಾಲತ್ ನಡೆಸಲಾಗುತ್ತಿದೆ ಎಂದು ಭಾಲ್ಕಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಯುಕ್ತ ಸಾರ್ವಜನಿಕರು ಹಾಗೂ ವಾಹನ ಮಾಲೀಕರು ತಮ್ಮ ಕುಂದು ಕೊರತೆಗಳನ್ನು ಕಚೇರಿಯಲ್ಲಿ ದಾಖಲಿಸಬಹುದಾಗಿದೆ ಹಾಗೂ ತೆರಿಗೆ ಬಾಕಿ ಉಳಿಸಿಕೊಂಡ ವಾಹನ ಮಾಲೀಕರುಗಳು ಸಾರಿಗೆ ಅದಾಲತ್ನಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.