ಉಪ್ಪಿನಂಗಡಿ.26.ಫೆ.25:- ರಾಜ್ಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರು ಕಡಿಮ ಮತ್ತು ಕೇವಲ 6 ತಿಂಗಳು ವೇತನ ಪಡುತ್ತಿದ್ದಾರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ನೀಡುವ ವೇತನವನ್ನು ₹30 ಸಾವಿರಕ್ಕೆ ಹೆಚ್ಚಳ ಮಾಡುವಂತೆ ಆಗ್ರಹಿಸಿ ಉಪ್ಪಿನಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರ ನಿಯೋಗವು ಶಾಸಕ ಅಶೋಕ್ ರೈ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ.
‘ರಾಜ್ಯದಾದ್ಯಂತ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 4,659 ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದು, ಮಾಸಿಕ ₹12 ಸಾವಿರ ವೇತನ ನೀಡಲಾಗುತ್ತಿದೆ. ಈ ಮೊತ್ತದಲ್ಲಿ ಜೀವನ ನಿರ್ವಹಣೆ ಕಷ್ಟವಾಗಿದೆ. ಸೇವಾ ಭದ್ರತೆಯೂ ಇಲ್ಲದಂತಾಗಿದೆ’ ಎಂದು ಮನವಿಯಲ್ಲಿ ಹೇಳಿದ್ದಾರೆ.
ಉಪ್ಪಿನಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಾದ ತನುಜಾಕ್ಷಿ, ಪ್ರಜ್ಞಾ, ನವ್ಯಶ್ರೀ, ಅಕ್ಷತಾ ಮತ್ತಿತರರು ನಿಯೋಗದಲ್ಲಿ ಇದ್ದರು.