ಬೀದರ.19.ಮಾರ್ಚ.25: – 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ತೊಗರಿ ನೋಂದಣಿ ಅವಧಿಯನ್ನು ದಿನಾಂಕ: 31-03-2025ರ ವರೆಗೆ ವಿಸ್ತರಿಸಿ ಸರ್ಕಾರ ಆದೇಶಿಸಿದೆ ಎಂದು ಬೀದರ ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೀದರ ಜಿಲ್ಲೆಯಲ್ಲಿ ತೊಗರಿ ಖರೀದಿಗಾಗಿ ಒಟ್ಟು 112 ಕೇಂದ್ರಗಳನ್ನು ತೆರೆಯಲಾಗಿದ್ದು, ಖರೀದಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈಗಾಗಲೆ ತೊಗರಿ ಖರೀದಿಗಾಗಿ ನೋಂದಣಿ ಕಾಲಾವಧಿಯು ದಿನಾಂಕ: 17-03-2025 ರಂದು ಕೊನೆಗೊಳ್ಳುತ್ತಿತ್ತು, ಆದರೆ ತೊಗರಿ ನೋಂದಣಿ ತಂತ್ರಾoಶದಲ್ಲಿ ತಾಂತ್ರಿಕ ಸಮಸ್ಯೆ ಕಂಡುಬAದಿದ್ದರಿAದ ಹಲವು ರೈತರು ಇನ್ನೂ ನೋಂದಣಿ ಮಾಡಿಕೊಂಡಿರಲಿಲ್ಲ. ಸದರಿ ಸಮಸ್ಯೆಯನ್ನು ಪ್ರಸ್ತಾಪಿಸಿ ಬೀದರ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯು ದಿನಾಂಕ: 15-03-2025 ರಂದು ರಾಜ್ಯ ಸರ್ಕಾರಕ್ಕೆ ನೋಂದಣಿ ಅವಧಿಯನ್ನು ವಿಸ್ತರಿಸಲು ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು.
ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್ ತೊಗರಿಗೆ ರೂ. 7550-00 ದರದಲ್ಲಿ ಕೇಂದ್ರ ಸರ್ಕಾರವು ಖರೀದಿಸುತ್ತಿದ್ದು, ಇದರ ಜೊತೆಗೆ ರಾಜ್ಯ ಸರ್ಕಾರವು ಪ್ರತಿ ಕ್ವಿಂಟಾಲ್‌ಗೆ ರೂ. 450-00ಗಳ ಪ್ರೋತ್ಸಾಹಧನ ಘೋಷಿಸಿದೆ.
ಆದ್ದರಿಂದ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಮಾರಾಟ ಮಾಡಲು ಇಚ್ಚಿಸಿವ ರೈತರು ಮಾರ್ಚ್ 31ರ ಒಳಗಾಗಿ ತಮ್ಮ ಹೆಸರುಗಳು ನೋಂದಾಯಿಸಿಕೊAಡು ಸದರಿ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಅವರು ತಿಳಿಸಿದ್ದಾರೆ.