ಬೀದರ.23.ಮಾರ್ಚ.25:ಗೆ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ
ಗ್ರಾಮೀಣ ಜೀವನೋಪಾಯ ಮಿಷನ್ ಜಿಲ್ಲಾ ಪಂಚಾಯತ ಬೀದರ ವತಿಯಿಂದ ಮಾರ್ಚ.23 ರಂದು ಬೆಳಿಗ್ಗೆ 10.30ಕ್ಕೆ ಸರಕಾರಿ ನೌಕರರ ಸಮುದಾಯ ಭವನ ಪ್ರತಾಪ ನಗರ ನೌಬಾದ ಬೀದರದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಸಚಿವರು ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಮಾಡಲಿದ್ದಾರೆ.
ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಐಟಿ ಮತ್ತು ಬಿಟಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಾದ ಶರಣಪ್ರಕಾಶ ಪಾಟೀಲ ಅವರುರುಗಳು ವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸಂಸದರಾದ ಸಾಗರ ಈಶ್ವರ ಖಂಡ್ರೆ, ಔರಾದ (ಬಾ) ಶಾಸಕರಾದ ಪ್ರಭು ಬಿ.ಚವ್ಹಾಣ, ಬಸವಕಲ್ಯಾಣ ಶಾಸಕರಾದ ಶರಣು ಸಲಗರ, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕರಾದ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ್ ಹಾಗೂ ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಡಾ.ಎಂ.ಜಿ.ಮೂಳೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ಬಿ.ನಾರಾಯಣರಾವ, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಜಾಬಶೆಟ್ಟಿ, ಬೀದರ ನಗರ ಸಭೆ ಅಧ್ಯಕ್ಷರಾದ ಮಹ್ಮದ ಗೌಸ್, ಬೀದರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಅಮೃತರಾವ ಚಿಮಕೋಡೆ ಅವರುಗಳು ಭಾಗವಹಿಸಲಿದ್ದಾರೆ.