ರಾಯಚೂರು.25.ಮಾರ್ಚ್.25:-ಒಂದು ವರ್ಷದ ಅವಧಿಯವರೆಗೆ 14 ಹಿರಿಯ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳಿಗೆ ತರಬೇತಿ ನೀಡುವ ಫಿಟ್ನೆಸ್ ತರಬೇತುದಾರರ ಸೇವೆ ಪಡೆಯಲು ನೇಮಕಾತಿ ಆದೇಶ ನೀಡುವ ತಾತ್ಕಾಲಿಕವಾಗಿ ಮಾಸಿಕ ಸಂಚಿತ ವೇತನ, ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಭಾರತದ ಅರ್ಹ ನಾಗರೀಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಯ ಅಧಿಸೂಚನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವೆಬ್ ಸೈಟ್ dyes.karnataka.gov.in ನಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಯಚೂರು ಇವರನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಅರ್ಜಿ ನಮೂನೆ ಮತ್ತು ಇನ್ನಿತರೆ ದಾಖಲೆಗಳನ್ನು ಏಪ್ರೀಲ್ 15ರ ಸಂಜೆ 4 ಗಂಟೆಯೊಳಗೆ ಮಹಾ ನಿರ್ದೇಶಕರು, ಕರ್ನಾಟಕ ಕ್ರೀಡಾ ಪ್ರಾಧಿಕಾರ, ರಾಜ್ಯ ಯುವ ಕೇಂದ್ರ, ನೃಪತುಂಗ ರಸ್ತೆ ಬೆಂಗಳೂರು -560001 ಇವರಿಗೆ ಸಲ್ಲಿಸಬೇಕು.