ಬೀದರ.28.ಮಾರ್ಚ.25:- 2024-25ನೇ ಸಾಲಿನ ಬೀದರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಏಪ್ರೀಲ್. 5 ಹಾಗೂ 6 ರಂದು ಬೆಳಿಗ್ಗೆ 10 ಗಂಟೆಯಿಂದ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುತ್ತದೆ ಎಂದು ಬೀದರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ರೀಡಾಕೂಟದಲ್ಲಿ ಭಾಗವಹಿಸಲು ಆಸಕ್ತರಿರುವ ಖಾಯಂ (ಕೆಜಿಐಡಿ ಸಂಖ್ಯೆ ಹೊಂದಿರುವ) ಸರ್ಕಾರಿ ನೌಕರರು ಗೂಗಲ್ ಫಾರ್ಮ್ https://forms.gle/DyiTmQErnphNc3fR8 ದಲ್ಲಿ ದಿನಾಂಕ: 03-04-2025 ರೊಳಗಾಗಿ ನೋಂದಣಿ ಮಾಡಿಕೊಳ್ಳಬೇಕು.
ಗೂಗಲ್ ಫಾರ್ಮರ ಮೂಲಕ ನೋಂದಣಿ ಮಾಡಿಕೊಂಡ ನೌಕರರಿಗೆ ಮಾತ್ರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಸ ನೀಡಲಾಗುತ್ತದೆಂದು ಅವರು ತಿಳಿಸಿದ್ದಾರೆ.