08/06/2025 11:46 AM

Translate Language

Home » ಲೈವ್ ನ್ಯೂಸ್ » ಮಾ.29 ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರ ಬೀದರ ಜಿಲ್ಲಾ ಪ್ರವಾಸ.!

ಮಾ.29 ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರ ಬೀದರ ಜಿಲ್ಲಾ ಪ್ರವಾಸ.!

Facebook
X
WhatsApp
Telegram

ಬೀದರ.29.ಮಾರ್ಚ.25: – ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಮಾರ್ಚ.29 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.


ಅವರು ಮಾರ್ಚ.29 ರಂದು ಬೆಳಿಗ್ಗೆ 11 ಗಂಟೆಗೆ ಹುಮನಾಬಾದ ಥೇರ್ ಮೈದಾನದಲ್ಲಿ ಹಮ್ಮಿಕೊಂಡಿರುವ ಜಿಲ್ಲಾಡಳಿತ, ನಗರಾಭಿವೃದ್ಧಿ ಇಲಾಖೆ ಬೀದರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಪುರಸಭೆ ಹುಮನಾಬಾದ ಇವರ ಸಂಯುಕ್ತಶ್ರಯದಲ್ಲಿ ಕೇಂದ್ರ ಪುರಸ್ಕøತ ಅಮೃತ್ 2.0 ಯೋಜನೆಯಡಿ ಹುಮನಾಬಾದ ಚಿಟಗುಪ್ಪಾ ಮತ್ತು ಹಳ್ಳಿಖೇಡ್ (ಬಿ) ಪಟ್ಟಣಗಳಿಗೆ ಕಾರಂಜಾ ಜಲಾಶಯದಿಂದ ನೀರು ಸರಬರಾಜು ಅಭಿವೃದ್ಧಿ ಯೋಜನೆಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ  ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಗೆ ಬೀದರ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6.05 ಗಂಟೆಗೆ ಪುರಸಭೆ ಕಛೇರಿ ಹತ್ತಿರ, ಕಾಲಿ ಮಜ್ಜಿದ್ ಭಾಲ್ಕಿಯಲ್ಲಿ ಸೌಹಾರ್ದ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಭಾಲ್ಕಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!