08/06/2025 7:00 PM

Translate Language

Home » ಲೈವ್ ನ್ಯೂಸ್ » ಏಪ್ರಿಲ್.2 ರಂದು ಶ್ರೀ ದೇವರ ದಾಸಿಮಯ್ಯ ಜಯಂತ್ಯುತ್ಸವ ಕಾರ್ಯಕ್ರಮ

ಏಪ್ರಿಲ್.2 ರಂದು ಶ್ರೀ ದೇವರ ದಾಸಿಮಯ್ಯ ಜಯಂತ್ಯುತ್ಸವ ಕಾರ್ಯಕ್ರಮ

Facebook
X
WhatsApp
Telegram

ಬೀದರ.29.ಮಾರ್ಚ.25:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಏಪ್ರಿಲ್.2 ರಂದು ಬೆಳಿಗ್ಗೆ 11.30 ಗಂಟೆಗೆ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮಂದಿರ ಬೀದರದಲ್ಲಿ ಶ್ರೀ ದೇವರ ದಾಸಿಮಯ್ಯ ಜಯಂತ್ಯುತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.


ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.


ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ, ಜೌರಾದ (ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ್, ಬಸವಕಲ್ಯಾಣ ಶಾಸಕರಾದ ಶರಣು ಸಲಗರ, ಬೀದರ ದಕ್ಷಿಣ ಶಾಸಕರಾದ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕರಾದ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ್ ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಡಾ.ಎಂ.ಜಿ.ಮೂಳೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ನಾರಾಯಣರಾವ, ಬೀದರ ನಗರಸಬೇ ಅಧ್ಯಕ್ಷರಾದ ಮಹ್ಮದ ಗೌಸ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಜಾಬಶೆಟ್ಟಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಬೀದರ ಲಿಂಗಾಯ ಮಹಾಮಠದ ಪೂಜ್ಯ ಶ್ರೀ ಮ.ನಿ.ಪ್ರ.ಪ್ರಭುದೇವ ಮಹಾಸ್ವಾಮೀಜಿ ಅವರು ಅತಿಥಿ ಉಪನ್ಯಾಸವನ್ನು ನೀಡಲಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!