ಬೀದರ.28.ಏಪ್ರಿಲ್.25:- ಕರ್ನಾಟಕ ಜಾನಪದ ಅಕಾಡೆಮಿಯು 2024ನೇ ಸಾಲಿನಲ್ಲಿ ದಿನಾಂಕ: 01-01-2024 ರಿಂದ 31-12-2024 ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಟ 150 ಪುಟಗಳಿಗೂ ಮೇಲ್ಪಟ್ಟಿರುವಂತೆ, ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ, ಜನಪದ ಸಂಕೀರ್ಣ ಪ್ರಕಾರಗಳ ಕುರಿತು ಅತ್ಯುತ್ತಮ ಜಾನಪದ ಕೃತಿಗಳಿಗೆ ಪುಸ್ತಕ ಬಹುಮಾನ ಯೋಜನೆಯಡಿಯಲ್ಲಿ ಆಯ್ಕೆ ಮಾಡಲು ಜಾನಪದ ಕೃತಿಗಳನ್ನು ಆಹ್ವಾನಿಸಲಾಗಿದೆ ಬೆಂಗಳೂರಿನ ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರಣ ಆಸಕ್ತ ಲೇಖಕರು/ ಪ್ರಕಾಶಕರು/ಸಂಪಾದಕರು ತಮ್ಮ ಒಂದು ಕೃತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ ಬೆಂಗಳೂರು-560002 ಇವರಿಗೆ ದಿನಾಂಕ: 20-05-2025 ರೊಳಗಾಗಿ ತಲುಪುವಂತೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.
ಈಗಾಗಲೇ ಪುಸ್ತಕ ಬಹುಮಾನ ಪಡೆದ ಸಂಪಾದಕರು, ಲೇಖಕರು ಮತ್ತೆ ಪುಸ್ತಕ ಬಹುಮಾನ ಯೋಜನೆಗೆ ಕೃತಿಗಳನ್ನು ಕಳುಹಿಸಬಾರದೆಂದು ಅವರು ತಿಳಿಸಿದ್ದಾರೆ.