10/06/2025 3:58 AM

Translate Language

Home » ಲೈವ್ ನ್ಯೂಸ್ » ದೇವಸ್ಥಾನಗಳನ್ನು ನಿರಾಕರಿಸಿ, ದೇವರ ಕಲ್ಪನೆಯನ್ನು ಮನುಷ್ಯನ ಶರೀರಕ್ಕೆ ಸ್ಥಳಾಂತರಗೊಳಿಸಿ, ದೇಹವನ್ನೇ ದೇವಾಲಯವನ್ನಾಗಿ ಮಾಡಿದವರು ಬಸವಣ್ಣ.

ದೇವಸ್ಥಾನಗಳನ್ನು ನಿರಾಕರಿಸಿ, ದೇವರ  ಕಲ್ಪನೆಯನ್ನು ಮನುಷ್ಯನ ಶರೀರಕ್ಕೆ ಸ್ಥಳಾಂತರಗೊಳಿಸಿ, ದೇಹವನ್ನೇ ದೇವಾಲಯವನ್ನಾಗಿ ಮಾಡಿದವರು ಬಸವಣ್ಣ.

Facebook
X
WhatsApp
Telegram

ದೇವಸ್ಥಾನಗಳನ್ನು ನಿರಾಕರಿಸಿ, ದೇವರ  ಕಲ್ಪನೆಯನ್ನು ಮನುಷ್ಯನ ಶರೀರಕ್ಕೆ ಸ್ಥಳಾಂತರಗೊಳಿಸಿ, ದೇಹವನ್ನೇ ದೇವಾಲಯವನ್ನಾಗಿ ಮಾಡಿದವರು ಬಸವಣ್ಣ.

ಪುರೋಹಿತಶಾಹಿ ಕಲ್ಪಿಸಿದ ಸ್ವರ್ಗ – ನರಕಾದಿ ಶೋಷಕ ತಂತ್ರಗಳನ್ನು ಧಿಕ್ಕರಿಸಿ ಇಹದ ಬದುಕಿನ ಮೇಲಿನ ಪ್ರೀತಿಯನ್ನು ಮೂಢಿಸಿದ, ಅನೇಕ ಅವೈಚಾರಿಕವಾದ ಆಚರಣೆಗಳನ್ನೂ ಮೂಢನಂಬಿಕೆಗಳನ್ನು ತಿರಸ್ಕರಿಸಿದ, ವೃತ್ತಿಯ ತಾರತಮ್ಯಗಳ ಮೇಲಿನಿಂದ ಮನುಷ್ಯನ ಸಾಮಾಜಿಕ ಅಂತಸ್ತನ್ನು ಪರಿಗಣಿಸದೆ ಕಾಯಕವೆಲ್ಲವೂ ಪೂಜ್ಯವೆಂದು ಸಾರಿದವರು ಬಸವಣ್ಣ.

ನಾವಿಂದು ಸಂಘರ್ಷಮಯವಾದ ಸಾಮಾಜಿಕ ಮತ್ತು ರಾಜಕೀಯ ವ್ಯವಸ್ಥೆಯ ಬಂಧಿಯಾಗಿದ್ದೇವೆ. ನಾ‍ಲ್ಕು ದಿಕ್ಕುಗಳಿಂದಲೂ ಹಿಂಸೆ, ಸೇಡು, ಪ್ರತಿಕಾರಗಳ ಘೋಷಣೆಗಳು ಮೊಳಗುತ್ತಿರುವ ಈ ಕಾಲದಲ್ಲಿ ಬಸವಣ್ಣನವರು ನೀಡಿದ್ದ ‘‘ದಯೆಯೇ ಧರ್ಮದ ಮೂಲವಯ್ಯಾ’’ ಎಂಬ ಶಾಂತಿ-ಸೌಹಾರ್ದತೆಯ ಮಂತ್ರವನ್ನು ನಾವೆಲ್ಲರೂ ಮನನ ಮಾಡಿಕೊಳ್ಳಬೇಕಾಗಿದೆ.

ಅಂತಹ ಅರಿವಿನ ಬೆಳಕನ್ನು ನಮ್ಮೆಲ್ಲರಲ್ಲಿಯೂ ಬಸವಣ್ಣ ಮೂಡಿಸಲಿ ಎಂದು ಹಾರೈಸುತ್ತೇನೆ.
ನಾಡಬಂಧುಗಳಿಗೆ ಬಸವ ಜಯಂತಿಯ ಶುಭಾಶಯಗಳು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!