06/08/2025 4:39 AM

Translate Language

Home » ಲೈವ್ ನ್ಯೂಸ್ » ಆರು ಗಡಿ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ. ಪಂಜಾಬ್

ಆರು ಗಡಿ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ. ಪಂಜಾಬ್

Facebook
X
WhatsApp
Telegram

ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ಪಂಜಾಬ್‌ನ ಆರು ಗಡಿ ಜಿಲ್ಲೆಗಳ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮೃತಸರ, ಫಿರೋಜ್‌ಪುರ, ಪಠಾಣ್‌ಕೋಟ್, ಫಜಿಲ್ಕಾ, ಗುರುದಾಸಪುರ ಮತ್ತು ತರಣ್ ತರಣ್ ಜಿಲ್ಲೆಗಳಲ್ಲಿ ಶಾಲೆಗಳಿಗೆ ಮೇ 11ರವರೆಗೆ ರಜೆ ಘೋಷಣೆ ಮಾಡಲಾಗಿದೆ ಎಂದು ವರದಿಯಾಗಿದೆ.

ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಮುಂಜಾನೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ (ಪಿಒಕೆ) ಉಗ್ರರ ನೆಲೆಗಳ ಗುರಿಯಾಗಿಸಿ ‘ಆಪರೇಷನ್‌ ಸಿಂಧೂರ’ ಕಾರ್ಯಾಚರಣೆ ನಡೆಸಿದೆ. ಇದರಿಂದಾಗಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ.

ಭಾರತೀಯ ಸೇನೆ ನಡೆಸಿದ ಕ್ಷಿಪ್ರ ದಾಳಿಯಲ್ಲಿ 70ರಿಂದ 100 ಭಯೋತ್ಪಾದಕರು ಹತರಾಗಿದ್ದಾರೆ. ಆದರೆ, ಈ ದಾಳಿಗಳಲ್ಲಿ ಕನಿಷ್ಠ 26 ಜನರು ಮೃತಪಟ್ಟಿದ್ದಾರೆ ಮತ್ತು 46 ಜನರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಸೇನೆ ಹೇಳಿಕೊಂಡಿದೆ.

‘ಸೇನಾ ನೆಲೆಯನ್ನು ಗುರಿಯಾಗಿಸಿಕೊಂಡಿಲ್ಲ ಮತ್ತು ನಾಗರಿಕರಿಗೆ ಹಾನಿಯಾದ ವರದಿಗಳಿಲ್ಲ’ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD