ಬೆಂಗಳೂರು.11.ಮೇ .25:- ಕಾಲೇಜು ಶಿಕ್ಷಣ ಇಲಾಖೆಯು 2024-25ನೇ ಸಾಲಿನ ಬಾಕಿ ಉಳಿದ 997 ಅತಿಥಿ ಉಪನ್ಯಾಸಕರ ನೇಮಕ ಅವಧಿಗೆ ತಾತ್ಕಾಲಿಕವಾಗಿ 997 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿದೆ.
ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಕಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಕೌನ್ಸೆಲಿಂಗ್ ಮೂಲಕ ನೇಮಕ ಮಾಡಿಕೊಳ್ಳಲಾಗಿದೆ.
ಹಿಂದಿನ ಸಾಲಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದವರನ್ನು ಈಗಾಗಲೇ ಲಭ್ಯವಿರುವ ಹೆಚ್ಚುವರಿ ಕಾರ್ಯಭಾರಕ್ಕೆ ಅನುಗುಣವಾಗಿ ಮುಂದುವರಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳ ವಿಷಯವಾರು ಆಯ್ಕೆಪಟ್ಟಿಯನ್ನು ಇಲಾಖೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಆಯ್ಕೆಯಾದವರು 3 ದಿನದೊಳಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಆಗಸ್ಟ್ 2ರವರೆಗೆ ಮಾತ್ರ ಇವರನ್ನು ಮುಂದುವರಿಸಲು ತಿಳಿಸಲಾಗಿದೆ.