ಬೆಂಗಳೂರು.13.ಮೇ.25:- ರಾಜ್ಯದ ಜನತೆಗೆ ಉಚಿತವಾಗಿ ಕಣ್ಣಿನ ಚಿಕಿತ್ಸೆ, ಕನ್ನಡಕ, ಲೆನ್ಸ್ ವಿತರಣೆಗೆ ರಾಜ್ಯಾದ್ಯಂತ ‘ಆಶಾಕಿರಣ’ ಯೋಜನೆ ವಿಸ್ತರಣೆ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯೋಜನೆ ಅನುಷ್ಠಾನಗೊಳಿಸುತ್ತಿದೆ. ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಚಿಕ್ಕಬಳ್ಳಾಪುರ, ಹಾವೇರಿ, ಕಲಬುರಗಿ ಸೇರಿ ಕೆಲವು ಜಿಲ್ಲೆಗಳಲ್ಲಿ ಯೋಜನೆ ಜಾರಿಗೊಳಿಸಲಾಗಿದ್ದು, ಉತ್ತಮ ಪ್ರತಿಕ್ರಿಯೆ ಬಂದ ಹಿನ್ನೆಲೆಯಲ್ಲಿ ಉಳಿದ ಜಿಲ್ಲೆಗಳಲ್ಲಿಯೂ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.
ಎಲ್ಲಾ ಜಿಲ್ಲೆಗಳಲ್ಲಿಯೂ ಆಶಾಕಿರಣ ಯೋಜನೆ ವಿಸ್ತರಿಸಿ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಶಾಶ್ವತ ದೃಷ್ಟಿ ಪರೀಕ್ಷಾ ಕೇಂದ್ರಗಳ ಸ್ಥಾಪನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಮನೆಮನೆಗೆ ತೆರಳಿ ಕಣ್ಣಿನ ಪರೀಕ್ಷೆ ನಡೆಸಲಾಗುವುದು.
ದ್ವಿತೀಯ ಹಂತದ ಪರೀಕ್ಷೆ ಮತ್ತು ಶಸ್ತ್ರಚಿಕಿತ್ಸೆಯನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ನಡೆಸಲಾಗುವುದು. ಅಗತ್ಯವಿದ್ದಲ್ಲಿ ಕನ್ನಡಕ ಅಥವಾ ಕಾಂಟ್ಯಾಕ್ಟ್ ಲೆನ್ಸ್ ಗಳನ್ನು ಉಚಿತವಾಗಿ ನೀಡಲಾಗುವುದು ಎನ್ನಲಾಗಿದೆ.