09/06/2025 8:35 PM

Translate Language

Home » ಲೈವ್ ನ್ಯೂಸ್ » ಮೆಟ್ರಿಕ್ ನಂತರ ಬಾಲಕ ಬಾಲಕಿಯರ ವಿದ್ಯಾರ್ಥಿ
ನಿಲಯಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಮೆಟ್ರಿಕ್ ನಂತರ ಬಾಲಕ ಬಾಲಕಿಯರ ವಿದ್ಯಾರ್ಥಿ
ನಿಲಯಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

Facebook
X
WhatsApp
Telegram

ಬೀದರ.21.ಮೇ.25:- ಬೀದರ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಮೆಟ್ರಿಕ ನಂತರ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ,ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ & ಎಸ್.ಟಿ ರೂ. 2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಮತ್ತು ಇತರೆ ರೂ. 1.00 ಲಕ್ಷ ಇದ್ದಿರುತ್ತದೆ. ವಿದ್ಯಾರ್ಥಿಗಳು ವೆಬ್‌ಸೈಟ್  https://shp.karnataka.gov.in/bcwd     ಮೂಲಕ ದಿನಾಂಕ: 20-06-2025 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ತಾಲ್ಲೂಕಾವಾರು ವಿದ್ಯಾರ್ಥಿನಿಲಯಗಳ ವಿವರಗಳಿಗೆ ವೆಬ್‌ಸೈಟ್  https://bcwd.karnataka.gov.in    ಹಾಗೂ ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ವೆಬ್‌ಸೈಟ್  bcwdhelpline@gmail.com  ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ ತಾಲ್ಲೂಕಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೀದರ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 ಮತ್ತು 8050770005 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!