Home » ಲೈವ್ ನ್ಯೂಸ್ » ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಆಶಾ ದೀಪ ಯೋಜನೆ.!

ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಆಶಾ ದೀಪ ಯೋಜನೆ.!

Facebook
X
WhatsApp
Telegram

ರಾಜ್ಯ ಸರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳ ಅಭಿವೃದ್ಧಿಗಾಗಿ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಒದಗಿಸುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

ಎಸ್ಸಿ/ಎಸ್ಟಿಗಳಿಗೆ ಉದ್ಯೋಗ:

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಕಾರ್ಮಿಕರಿಗೆ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ದೊರಕಿಸಿಕೊಡಲು ಆಶಾ ದೀಪ ಯೋಜನೆ ಜಾರಿಗೊಳಿಸಲಾಗಿದ್ದು, ಅದರಿಂದ ಒಟ್ಟಾರೆ 5,733 ಮಂದಿ ಪ್ರಯೋಜನ ಪಡೆದಿದ್ದಾರೆ. ಅದರ ಜತೆಗೆ ವಲಸೆ ಕಟ್ಟಡ ಕಾರ್ಮಿಕರಿಗಾಗಿ ವಸತಿ ಸಮುಚ್ಚಯ ನಿರ್ಮಾಣ, 43 ಸ್ಥಳಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಕಾರ್ಮಿಕ ಸೇವಾ ಕೇಂದ್ರಗಳ ಸ್ಥಾಪನೆ, 65 ಲಕ್ಷ ಉದ್ಯೋಗಿಗಳಿಗೆ ಅನುಕೂಲವಾಗುವಂತೆ ಕಡ್ಡಾಯ ಉಪಧನ ಕಾಯ್ದೆ, ರಾಜ್ಯದ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ಎಲ್ಲ ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆಗಳ ನಿರ್ಮಾಣ ಗುರಿ ಹೊಂದಲಾಗಿದೆ ಎಂದು ಸಂತೋಷ್‌ ಲಾಡ್‌ ಹೇಳಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology