ಬೀದರ.04.ಜೂನ್.25:- 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವವಿದ್ಯಾರ್ಥಿಗಳಿಗೆ (5ರಿಂದ 10ನೇ ತರಗತಿ) (ರಾಜ್ಯ ವಿದ್ಯಾರ್ಥಿನಿಲಯತಂತ್ರಾಶ) ಮೂಲಕ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ ಎಂದು ಭಾಲ್ಕಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ. 2.50 ಲಕ್ಷ ರೂ., ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ 1.00 ಲಕ್ಷ ರೂ. ಇದ್ದಿರುತ್ತದೆ. ವಿದ್ಯಾರ್ಥಿಗಳು ಅನ್‌ಲೈನ್ ವೆಬ್‌ಸೈಟ್: https://shp.karnataka.gov.in/bcwd
ನಲ್ಲಿ ದಿನಾಂಕ: 16-06-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https//bcwd.karnataka.gov.in/ ನೋಡುಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಗೆ ಇ-ಮೇಲ್ ಮುಖಾಂತರ ಅಥವಾ ವಸತಿ ನಿಲಯಗಳಿಗೆ ಅಥವಾ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಹುಮನಾಬಾದಗೆ ಅಗತ್ಯ ದಾಖಲಾತಿಗಳೊಂದಿಗೆ ಸಂಪರ್ಕಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8050770004, 8050770005, 08483200233, 8660636252 ಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.