ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ್ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹ ಅಭ್ಯರ್ಥಿಗಳು ಹೆಸರು, ದೂರವಾಣಿ, ಮೊಬೈಲ್ ಸಂಖ್ಯೆಯೊಂದಿಗೆ ಪೂರ್ಣ ವಿಳಾಸ, ಜನ್ಮ ದಿನಾಂಕ, ವಿದ್ಯಾರ್ಹತೆ ಮತ್ತು ವಾಸಸ್ಥಳದ ಬಗ್ಗೆ ಮಾಹಿತಿಯುಳ್ಳ ಅರ್ಜಿಯ ಜೊತೆಗೆ ಸ್ನಾತಕೋತ್ತರ ಪದವಿಯ ದೃಢಕೃತ ಅಂಕಪಟ್ಟಿ, ಬಿ.ಎಡ್. ಪದವಿ ಪಡೆದ ದೃಢೀಕೃತ ಅಂಕಪಟ್ಟಿ, ಜನ್ಮ ದಿನಾಂಕಕ್ಕೆ ಸಂಬಂಧಿಸಿದ ದಾಖಲೆಯ (ಎಸೆಸೆಲ್ಸಿ ಅಂಕ ಪಟ್ಟಿ) ದೃಢೀಕೃತ ಪ್ರತಿಗಳೊಂದಿಗೆ ಜೂ.13 ರ ಒಳಗಾಗಿ ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರಿಗೆ ಸಲ್ಲಿಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಅತಿಥಿ ಉಪನ್ಯಾಸಕರ ಹುದ್ದೆಗೆ ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಲಾಗುವುದು. ಸದರಿ ನೇಮಕಾತಿಗಳು ತಾತ್ಕಾಲಿಕವಾಗಿರುತ್ತವೆ ಎಂದು ಅವರು ತಿಳಿಸಿದ್ದಾರೆ.
ಇವರಿಗೆ ಸಂಪರ್ಕ ಮಾಡಿ
ಬೀದರ್ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.