03/08/2025 12:16 AM

Translate Language

Home » ಲೈವ್ ನ್ಯೂಸ್ » ಹೊಸ ಜಿಲ್ಲೆಗಳು ರಚನೆ: ಬಿಗ್‌ ಅಪ್‌ಡೇಟ್‌ ಕೊಟ್ಟ ಸಿಎಂ ಸಿದ್ದರಾಮಯ್ಯ

ಹೊಸ ಜಿಲ್ಲೆಗಳು ರಚನೆ: ಬಿಗ್‌ ಅಪ್‌ಡೇಟ್‌ ಕೊಟ್ಟ ಸಿಎಂ ಸಿದ್ದರಾಮಯ್ಯ

Facebook
X
WhatsApp
Telegram

ಜೂನ್‌ 11: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 7ರಂದು ತಮ್ಮ ರಾಜಕೀಯ ಜೀವನದಲ್ಲಿ 16ನೇ ಬಾರಿ ರಾಜ್ಯ ಬಜೆಟ್ ಮಂಡನೆ ಮಾಡಿ ಇತಿಹಾಸ ಸೃಷ್ಟಿ ಮಾಡಿದ್ದಾರೆ. ಹೊಸ ಜಿಲ್ಲೆಗಳ ರಚನೆಗೆ ಸಿದ್ದರಾಮಯ್ಯ ಅವರು ಮುಂದಾಗಿದ್ದಾರೆ.

ಕರ್ನಾಟಕ ಬಜೆಟ್‌ ಮಂಡನೆಗೆ ಎರಡು ದಿನ ಮಾತ್ರ ಬಾಕಿಯಿದೆ. ಈ ಬಜೆಟ್‌ನಲ್ಲಿ ಸಿದ್ದರಾಮಯ್ಯ ಅವರು ಶುಕ್ರವಾರ ಚಿಕ್ಕೋಡಿ ಹಾಗೂ ಗೋಕಾಕ್‌ ಜನತೆಗೆ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ. ಮೂರು ದಶಕಗಳ ಹೋರಾಟಕ್ಕೆ ಸಿದ್ದರಾಮಯ್ಯ ಹೊಸ ಜಿಲ್ಲೆಗಳ ಮೂಲಕ ಉತ್ತರ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಪ್ರಾದೇಶಿಕ ಆಯುಕ್ತರಿಗೆ ಈ ಸಂಬಂಧ ಎಲ್ಲ ರೀತಿಯ ಮಾಹಿತಿಯನ್ನು ಸಲ್ಲಿಸುವಂತೆ ಸರ್ಕಾರ ಸೂಚನೆ ನೀಡಿದ್ದು, ಚಿಕ್ಕೋಡಿ ಹಾಗೂ ಗೋಕಾಕ್‌ ಎಂಬ ಹೊಸ ಜಿಲ್ಲೆಗಳು ಉದಯವಾಗಲಿವೆ. ಕಳೆದ ಬಾರಿಯ ಆಯವ್ಯಯದಲ್ಲಿ ಹಲವು ಯೋಜನೆಗಳು ಘೋಷಣೆಯಾಗುವ ನಿರೀಕ್ಷೆಯಲ್ಲಿ ರಾಜ್ಯದ ಜನತೆ ಇದ್ದರು.

ಅಲ್ಲದೇ 16 ನೇ ಬಜೆಟ್‌ನಲ್ಲಿ ವಿಶೇಷ ಯೋಜನೆಗಳ ಜೊತೆಗೆ ಕೆಲವು ಜಿಲ್ಲೆಗಳ ರಚನೆ ಕುರಿತು ಶುಭ ಸುದ್ದಿ ಸಿಗಲಿದೆ ಎಂಬ ನಿರೀಕ್ಷೆ ಇತ್ತು. ಆದರೆ, ಬಜೆಟ್‌ ನಲ್ಲಿ ಈ ಬಗ್ಗೆ ಯಾವುದೇ ಘೋಷಣೆಯನ್ನ ಸಿದ್ದರಾಮಯ್ಯ ಅವರು ಮಾಡಿರಲಿಲ್ಲ. ಇದೀಗ ಶಾಸಕರು ಹಾಗೂ ಸಚಿವರ ಒತ್ತಡ ಹೆಚ್ಚಾಗಿದ್ದು, ಹೊಸ ಜಿಲ್ಲೆಗಳ ರಚನೆಗೆ ಸಿದ್ದರಾಮಯ್ಯ ಅವರು ಮುಂದಾಗಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಜಿಲ್ಲೆಗಳ ವಿಭಜನಯೆ ಕೂಗು ಇದೀಗ ಹೆಚ್ಚಾಗಿದೆ. ರಾಜ್ಯದ ಅತಿದೊಡ್ಡ ಜಿಲ್ಲೆ ಬೆಳಗಾವಿ ಜಿಲ್ಲೆಯ ವಿಭಜನೆಗೆ ಕುರಿತು ಸ್ಥಳೀಯ ಶಾಸಕರು ಹಾಗೂ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಈ ಹಿಂದೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದ್ದು, ಪ್ರಸ್ತುತ 31 ಜಿಲ್ಲೆಗಳ ಪೈಕಿ ಉತ್ತರ ಕರ್ನಾಟಕದ ಜಿಲ್ಲೆಗಳ ವಿಭಜನೆಯ ಕೂಗು ಹೆಚ್ಚಾಗಿದ್ದು, ಅತಿ ದೊಡ್ಡ ಜಿಲ್ಲೆ ಬೆಳಗಾವಿಯನ್ನು ವಿಭಜಿಸಿ ಬೈಲಹೊಂಗಲ ಅಥವಾ ಗೋಕಾಕ್‌, ಬೆಳಗಾವಿ ಹಾಗೂ ಚಿಕ್ಕೋಡಿ ಜಿಲ್ಲೆಗಳ ರಚನೆಗೆ ಬೇಡಿಕೆಯಿದೆ.

ಇನ್ನೂ ತುಮಕೂರಿನ ಮಧುಗಿರಿ, ತಿಪಟೂರು, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಜಿಲ್ಲೆಗಳಾಗಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಅಲ್ಲದೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿರಸಿ, ಮೈಸೂರಿನ ಹುಣಸೂರು ಜಿಲ್ಲೆಗಳಾಗಬೇಕು ಎಂಬುದು ಅಲ್ಲಿನ ಜನರ ಆಗ್ರಹಿಸಿದ್ದಾರೆ.

ಇದೀಗ ಇಂದು ಗೌರಿಬಿದನೂರಿನಲಗಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೆಳಗಾವಿಯಲ್ಲಿ ಮಾತ್ರ ಹೊಸ ಜಿಲ್ಲೆ ರಚಿಸುವ ಬಗ್ಗೆ ಬೇಡಿಕೆ ಇದ್ದು, ಇದಕ್ಕೆ ಸಂಬಂಧಿಸಿದಂತೆ ಶಾಸಕರು, ಸಚಿವರು ಮಾತು ಸಂಸದರ ಸಭೆಯನ್ನು ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ರಾಜ್ಯಪಾಲರು ಅವರಾಗೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. ಜೂನ್ 4 ರಂದು ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಆರ್.ಸಿ. ಬಿ ಯ ವತಿಯಿಂದ ಆರ್.ಸಿ. ಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ನನಗೆ ಅಂದು ಬೆಳಿಗ್ಗೆ 11.29 ನಿಮಿಷಕ್ಕೆ ಕೆ.ಎಸ್.ಸಿ.ಎ ವತಿಯಿಂದ ಶಂಕರ್ ಮತ್ತು ಜಯರಾಮ್ ಅವರು ಆಹ್ವಾನ ನೀಡಿ ಮನವಿ ಮಾಡಿಕೊಂಡರು.

ಇದಕ್ಕೆ ನಾನು ಒಪ್ಪಿಗೆ ನೀಡಿದೆ. ಬಳಿಕ ಅವರು ರಾಜ್ಯಪಾಲರನ್ನು ಆಹ್ವಾನ ಮಾಡಿರುವುದಾಗಿ ತಿಳಿಸಿದರು. ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ರಾಜ್ಯಪಾಲರು ಅವರಾಗಿಯೇ ಬಂದಿದ್ದರು ಎಂದು ಪ್ರಾಚಾರವಾಗಿದ್ದು ಅದು ತಪ್ಪು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿದ್ದ ಗೋವಿಂದರಾಜು ಅವರು ರಾಜ್ಯಪಾಲರಿಗೆ ಕರೆ ಮಾಡಿ ಫೋನ್ ನನಗೆ ಕೊಟ್ಟರು.

ಆಗ ನಾನು ಕೂಡ ಕಾರ್ಯಕ್ರಮಕ್ಕೆ ತೆರಳುತ್ತಿದ್ದು ನೀವು ಬನ್ನಿ ಎಂದು ಆಹ್ವಾನಿಸಿದೆ ಎಂದರು. ರಾಜ್ಯಪಾಲರು ಕೂಡ ಕಾರ್ಯಕ್ರಮಕ್ಕೆ ಆಗಮಿಸಿದರು. ಸನ್ಮಾನ ಕಾರ್ಯಕ್ರಮ 20 ನಿಮಿಷಗಳಲ್ಲಿ ಮುಗಿದುಹೋಯಿತು. ಮಾಧ್ಯಮಗಳು ಹಾಗೂ ಸುದ್ದಿ ವಾಹಿನಿಗಳಲ್ಲಿ ರಾಜ್ಯಪಾಲರು ತಾವಾಗಿಯೇ ಬಂದಿದ್ದಾರೆ ಎಂದು ವರದಿಯಾದ್ದರಿಂದ ಸ್ಪಷ್ಟೀಕರಣ ನೀಡುತ್ತಿದ್ದೇನೆ ಎಂದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!