ಜನಸ್ಪಂದನ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಿ-ಸಚಿವ ರಹೀಂ ಖಾನ್
ಬೀದರ.01.ಜುಲೈ.25:- ಇದ್ದ ಸ್ಥಳದಲ್ಲಿಯೇ ಜನರ ಸಮಸ್ಯೆಗಳನ್ನು ಬಗೆಹರಿಸುವ ಕರ್ನಾಟಕ ಸರ್ಕಾರದ ಜನಪ್ರಿಯ ಕಾರ್ಯಕ್ರಮವೇ ಜನಸ್ಪಂದನ ಕಾರ್ಯಕ್ರಮವಾಗಿದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ತಿಳಿಸಿದರು. ಅವರು ಮಂಗಳವಾರ ಜನವಾಡ ನಾಡ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ತಾಲೂಕಾ ಮಟ್ಟದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜನವಾಡ ಭಾಗದಲ್ಲಿ ಏನೇ ಸಮಸ್ಯೆಯಾಗಿರಲಿ ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳು ಇಲ್ಲೆ ಇದ್ದು ನೇರವಾಗಿ ಭೇಟಿ…