Author: prajaprabhat

  • |

    ಇಂದು ರಾಯಚೂರು ತಾಲೂಕು ಕೆಡಿಪಿ ಸಭೆ

    ರಾಯಚೂರು.03.ಸೆಪ್ಟೆಂಬರ್.25: ರಾಯಚೂರು ತಾಲೂಕು ಪಂಚಾಯತಿಯ 6ನೇ ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 2ರ ಬೆಳಿಗ್ಗೆ 10 ಗಂಟೆಗೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸಂಬoಧಿಸಿದ ಅಧಿಕಾರಿಗಳು ಇಲಾಖೆಯ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ಹಾಜರಾಗಬೇಕು ಎಂದು ತಾಲೂಕು ಪಂಚಾಯಿತಿ ಇಒ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • |

    ಕೊಲೆ ಮಾಡಿದ ಅಪರಾಧಿಗೆ ಜೀವಾವಧಿ ಶಿಕ್ಷೆ

    ರಾಯಚೂರು.03.ಸೆಪ್ಟೆಂಬರ್.25: ಕೊಲೆ ಮಾಡಿದ ಅಪರಾಧಿಗೆ ರಾಯಚೂರಿನ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕಲಂ 504, 506 ಮತ್ತು 302 ಆಫ್ ಐಪಿಸಿ ಅಡಿಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ. ಹೊಲ ಸ್ವಚ್ಛ ಮಾಡಿ ಸಾಗುವಳಿ ಮಾಡಿದ್ದು ಸ್ವಚ್ಛ ಮಾಡಿದ ಕೂಲಿ ಹಣ ವ್ಯತ್ಯಾಸವಾಗಿ ಜಗಳ ಮಾಡಿಕೊಂಡಿದ್ದು, ಅದೇ ವರ್ಷ ಗಣೇಶ ಮೂರ್ತಿ ತರುವ ವಿಚಾರದಲ್ಲಿಯೂ ಇಬ್ಬರ ನಡುವೆ ಜಗಳವಾಗಿ ಆ ಸಮಯದಲ್ಲಿ ಆರೋಪಿತನು ದ್ವೇಷ ಸಾಧಿಸುತ್ತ ದಿನಾಂಕ 12-03-2017ರಂದು ರಾತ್ರಿ 9 ಗಂಟೆ ಸುಮಾರಿಗೆ ಕಬ್ಬಿಣದ…

  • |

    ಬೇಡವಾದ ನವಜಾತ ಶಿಶುವನ್ನು ದತ್ತು ಸಂಸ್ಥೆಗೆ ದಾಖಲಿಸಿ

    ರಾಯಚೂರು.03.ಸೆಪ್ಟೆಂಬರ.25: ಬೇಡವಾದ ನವಜಾತ ಶಿಶುವನ್ನು ಸರ್ಕಾರಿ ವಿಶೇಷ ದತ್ತು ಸಂಸ್ಥೆಗೆ ಒಪ್ಪಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ ಎರಡು ನವಜಾತ ಶಿಶುಗಳನ್ನು ಅಪರಿಚಿತ ವ್ಯಕ್ತಿಗಳು ಹಳ್ಳದ ದಂಡೆಯಲ್ಲಿ ಮತ್ತು ಕ್ಯಾನಲ್ ಪಕ್ಕದಲ್ಲಿ ಎಸೆದು ಹೋಗಿದ್ದು, ಸಾರ್ವಜನಿಕರು ನೀಡಿದ ಮಾಹಿತಿಯ ಆಧಾರದ ಮೇಲೆ ಎರಡು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಇದು ಅತ್ಯಂತ ಅಮಾನವೀಯ ಕೃತ್ಯವಾಗಿದೆ. ನವಜಾತ ಶಿಶುಗಳು ತಮಗೆ ಬೇಡವಾದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ:1098ಗೆ ಕರೆ…

  • |

    ಬಾಪೂಜಿ ಪ್ರಬಂಧ ಸ್ಪರ್ಧೆಸ್ಪರ್ಧೆ

    ರಾಯಚೂರು.02.ಸೆಪ್ಟೆಂಬರ್.25: ಅಕ್ಟೋಬರ್ 2ರಂದು ನಡೆಯುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿಯ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ರಾಯಚೂರ ಕಚೇರಿಯಿಂದ ಬಾಪೂಜಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ. ವಿದ್ಯಾರ್ಥಿ ಯುವಜನರಲ್ಲಿ ಗಾಂಧೀಜಿಯವರ ಬದುಕು, ಸ್ವಾತಂತ್ರö್ಯ ಚಳವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮೊದಲಾದ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ವಿಭಾಗಗಳಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಬಾಪೂಜಿ…

  • |

    ನವೋದ್ಯಮ ಪ್ರಾರಂಭಿಸಲು ಆಸಕ್ತರಿಂದ ಅರ್ಜಿ ಆಹ್ವಾನ

    ಕೊಪ್ಪಳ.೦2.ಸೆಪ್ಟೆಂಬರ್.25:- 2025-26ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ಯುವಕರು ಹಾಗೂ ಯುವತಿಯರಿಗೆ ನವೋದ್ಯಮಗಳನ್ನು  ಪ್ರಾರಂಭಿಸಲು ಉತ್ತೇಜನ ನೀಡುವ ಉದ್ದೇಶದಿಂದ  “Elevate (Minorities) 2025”  ಯೋಜನೆಯನ್ನು ಜಾರಿಗೆ ತಂದಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯನ್ನು ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಇಲಾಖೆಯ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುತ್ತಿದೆ. ಅರ್ಜಿದಾರರು ಅಧಿಕೃತ ವೆಬ್‌ಸೈಟ್  http://eitbt.karnataka.gov.in  ಮುಖಾಂತರ ಸೆಪ್ಟೆಂಬರ್ 15 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-22231007 ಗೆ ಸಂಪರ್ಕಿಸಬಹುದು ಅಥವಾ  elevate-ktech@ka.gov.in     …

  • |

    ಪೌಷ್ಠಿಕ ಆಹಾರ ಮತ್ತು ಆರೋಗ್ಯಕರ ಜೀವನಶೈಲಿಯಿಂದ ಸದೃಢರಾಗಿ: ನ್ಯಾ.ಮಹಾಂತೇಶ ದರಗದ

    ಕೊಪ್ಪಳ.02.ಸೆಪ್ಟೆಂಬರ್.25: ಪೌಷ್ಠಿಕ ಆಹಾರ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ಎಲ್ಲರೂ ಸದೃಢರಾಗಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ದರಗದ ಅವರು ಹೇಳಿದರು. ಮಂಗಳವಾರದoದು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇವರ ಸಂಯುಕ್ತಾಶ್ರದಲ್ಲಿ ಕೊಪ್ಪಳ ನಗರದ ದೇವರಾಜ ಅರಸ ಕಾಲೋನಿ ಅಂಗನವಾಡಿ…

  • |

    ಜಿಲ್ಲೆಯಲ್ಲಿ ಈವರೆಗೆ 92 ಲಕ್ಷ ಪುಟಗಳ ಡಿಜಿಟಲೀಕರಣ ಪೂರ್ಣ

    ಕೊಪ್ಪಳ.02.ಸೆಪ್ಟೆಂಬರ್.25: ಕಂದಾಯ ಇಲಾಖೆಯ ಹಳೆಯ ದಾಖಲೆಗಳನ್ನು ಸುರಕ್ಷಿತಗೊಳಿಸಲು ಹಾಗೂ ಸುಳ್ಳು ದಾಖಲೆ ಸೃಷ್ಠಿಸುವುದನ್ನು ತಡೆಗಟ್ಟಲು ಸರ್ಕಾರ ಜಾರಿಗೊಳಿಸಿರುವ ಭೂ ಸುರಕ್ಷಾ ಯೋಜನೆಯಡಿ ಜಿಲ್ಲೆಯಲ್ಲಿ ಈವರೆಗೂ ಒಟ್ಟು 92,50,801 ಪುಟಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ  ಡಾ. ಸುರೇಶ ಬಿ. ಇಟ್ನಾಳ   ಅವರು ತಿಳಿಸಿದ್ದಾರೆ. ಕೊಪ್ಪಳ ತಾಲ್ಲೂಕಿನಲ್ಲಿ ಒಟ್ಟು 37,994 ಕಡತಗಳಲ್ಲಿ(ಫೈಲ್) 24,110 ಕಡತಗಳ 14,76,190 ಪುಟಗಳನ್ನು ಹಾಗೂ ಒಟ್ಟು 11,684 ವಹಿಗಳಲ್ಲಿ(ರಿಜಿಸ್ಟರ್) 3,577 ವಹಿಗಳ 1,17,925 ಪುಟಗಳು ಸೇರಿದಂತೆ ಒಟ್ಟು 15,94,115 ಪುಟಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಕುಷ್ಟಗಿ ತಾಲ್ಲೂಕಿನಲ್ಲಿ ಒಟ್ಟು…

  • |

    ಸೆ.6 ಮತ್ತು 07 ರಂದು ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

    ಕೊಪ್ಪಳ.02.ಸೆಪ್ಟೆಂಬರ್.25: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2025-26ನೇ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಸೆಪ್ಟೆಂಬರ್ 6 ಮತ್ತು ಸೆ.7 ರಂದು ಪುರುಷ ಮತ್ತು ಮಹಿಳೆಯರಿಗೆ ಏರ್ಪಡಿಸಲು ನಿರ್ಧರಿಸಲಾಗಿದೆ. ಕೊಪ್ಪಳ ಜಿಲ್ಲಾ ಮಟ್ಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್‌ಬಾಲ್, ಖೋ-ಖೋ, ಥ್ರೋಬಾಲ್, ಕಬಡ್ಡಿ, ಯೋಗಾಸನ, ಹ್ಯಾಂಡ್‌ಬಾಲ್, ಟೇಬಲ್ ಟೆನ್ನಿಸ್, ಬಾಲ್ ಬ್ಯಾಡ್ಮಿಂಟನ್, ಕುಸ್ತಿ ಮತ್ತು ಬ್ಯಾಡ್ಮಿಂಟನ್ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಟೆನ್ನಿಸ್, ನೆಟ್‌ಬಾಲ್, ಈಜು ಸ್ಪರ್ಧೆಗಳನ್ನು ಆಯ್ಕೆ ಮಾಡಲಾಗುವುದು. ತಾಲ್ಲೂಕು ಮಟ್ಟದಲ್ಲಿ ಜರುಗಿದ…

  • |

    ಜಿಲ್ಲಾ ಮಟ್ಟದ ಅಪೆಕ್ಸ್ ಸಮಿತಿ ಸಭೆ

    ಜಲಮೂಲಗಳ ಸಂರಕ್ಷಣೆಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಕೊಪ್ಪಳ.02.ಸೆಪ್ಟೆಂಬರ್.25: ಜಿಲ್ಲೆಯ ಸಂಬoಧಿಸಿದ ಇಲಾಖೆಗಳು, ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜಲಮೂಲಗಳ ಗುರುತಿಸುವಿಕೆ ಮತ್ತು ರಕ್ಷಣೆ ಮಾಡಲು ಸಂಬoಧಿಸಿದ ಇಲಾಖೆಗಳ ಅಧಿಕಾರಿಗಳು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಜಿಲ್ಲೆಯಲ್ಲಿನ ಕೆರೆಗಳ ಒತ್ತುವರಿ ತೆರವು, ಕೆರೆ ಅಭಿವೃದ್ಧಿ ಹಾಗೂ ಕೆರೆಗಳ ಸಂರಕ್ಷಣೆ ಕುರಿತು ಜಿಲ್ಲಾ ಮಟ್ಟದ ಅಪೆಕ್ಸ್ ಸಮಿತಿ…

  • |

    ರಾಯಚೂರು ತಾಲೂಕು ತ್ರೈಮಾಸಿಕ ಕೆಡಿಪಿ ಸಭೆ

    * ಕೆಟ್ಟು ಹೋದ ಶುದ್ಧ ಕುಡಿವ ನೀರಿನ ಘಟಕಗಳ ದುರಸ್ತಿಗೆ ಸೂಚನೆ* ಬೇಸಿಗೆ ಮುಂಚೆ, ಕುಡಿವ ನೀರಿನ ಮುಂದಿನ ಪ್ಲಾನಗೆ ನಿರ್ದೇಶನ* ಮೀಟರ್ ಇಲ್ಲ, ಬಿಲ್ ಕಟ್ಟಿಲ್ಲ ಎಂದು ಕರೆಂಟ್ ಕಟ್ ಮಾಡದಿರಲು ಜೆಸ್ಕಾಂಗೆ ಸೂಚನೆ. ರಾಯಚೂರು.02.ಸೆಪ್ಟೆಂಬರ್.25:- ರೈತರಿಗೆ ಸಮರ್ಪಕ ಗೊಬ್ಬರ ವಿತರಣೆಗೆ ಕ್ರಮವಹಿಸಿ: ಶಾಸಕರಾದ ಬಸನಗೌಡ ದದ್ದಲ್ ಕಟ್ಟುನಿಟ್ಟಿನ ನಿರ್ದೇಶನರಾಯಚೂರು ಸೆಪ್ಡೆಂಬರ್ 02 (ಕ.ವಾ.): ಯಾವುದೇ ರೈತರು ಸರದಿ ಸಾಲಲಿ ನಿಂತು ಕಾಯದಂತೆ, ಸಣ್ಣ ರೈತರು ಸೇರಿದಂತೆ ಎಲ್ಲರಿಗೂ ಸಮರ್ಪಕ ಗೊಬ್ಬರ ವಿತರಣೆಗೆ ಅಗತ್ಯ ಕ್ರಮವಹಿಸಬೇಕು…