ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ: ಪತ್ರಕರ್ತರಿಗೆ ಆಹ್ವಾನ
ಬೀದರ.01.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿಯು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೀದರ್ನಲ್ಲಿ ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆ ಅವರು ಸಮಾರಂಭವನ್ನು ಉದ್ಘಾಟಿಸಿ ಪರಿಸರ ಸಂರಕ್ಷಣೆಯಲ್ಲಿ ಮಾಧ್ಯಮಗಳ ಪಾತ್ರದ ಕುರಿತು ಮಾತನಾಡಲಿದ್ದಾರೆ. ಪೌರಾಡಳಿತ ಸಚಿವ ರಹೀಂ ಖಾನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ತರಬೇತಿ ಕಾರ್ಯಕ್ರಮದಲ್ಲಿ “ನ್ಯೂಸ್ ರೂಂ ನಲ್ಲಿ…
Any questions related to prajaprabhat?