ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು.19.ಆಗಸ್ಟ್.25:- ಪರಿಶಿಷ್ಟ ಪಂಗಡಗಳ ಸಮುದಾಯಕ್ಕೆ ವಿವಿಧ ಯೋಜನೆಗಳ ಸಲ ಸೌಲಭ್ಯಕೆ ಅರ್ಜಿ ಆಹ್ವಾನ. ಭೂ ಒಡೆತನ ಯೋಜನೆ, ಸೇರಸಾಲ ಯೋಜನೆ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. 2023-24 , 2024-25 ಸಾಲಿನಲ್ಲಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 17 ಕೊನೆಯ ದಿನವಾಗಿದೆ.