ಸರ್ಕಾರಿ ಜಾಗದಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಕೆ ವಿರೋಧ ಮತ್ತು ದಲಿತರಿಗೆ ಬಹಿಷ್ಕಾರ.
ಬೀದರ.09.ಮೇ.25:- ಹುಲಸೂರ್ ತಾಲ್ಲೂಕಿನ ಗಡಿ ರಾಯಪಳ್ಳಿ ಗ್ರಾಮದ ಸರ್ಕಾರಿ ಜಾಗದಲ್ಲಿ ಅಳವಡಿಸಿದ ಅಂಬೇಡ್ಕರ್ ಹಾಗೂ ಬಸವಣ್ಣನವರ ಭಾವಚಿತ್ರಗಳನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಕೆಲ ದಿನಗಳ ಹಿಂದೆ ಗಡಿ ರಾಯಪಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಹಿನ್ನಲೆ ಗ್ರಾಮದಲ್ಲಿನ ಸರ್ಕಾರಿ ಭೂಮಿಯಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಹಾಕಲಾಗಿತ್ತು. ಎರಡು ದಿನಗಳ ಬಳಿಕ ಅದೇ ಊರಿನ ಇನ್ನೊಂದು ಸರ್ಕಾರಿ ಜಾಗದಲ್ಲಿ ಲಿಂಗಾಯತ ಸಮುದಾಯದವರು ಬಸವಣ್ಣನವರ ಭಾವಚಿತ್ರ ಅಳವಡಿಸಿದ್ದರು ಎನ್ನಲಾಗಿದೆ. ಇಂದು ದಿಢೀರ್ ಆಗಿ ಊರಲ್ಲಿನ ಎಲ್ಲ ಅಂಗಡಿ ಮುಂಗಟ್ಟುಗಳು ಮುಚ್ಚುವ ಮೂಲಕ ದಲಿತರಿಗೆ…
Any questions related to prajaprabhat?