ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ಕತಾರ್
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕತಾರ್ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಪಹಲ್ಗಾಮ್ನಲ್ಲಿ ನಡೆದ ಗಡಿಯಾಚೆಗಿನ ಭಯೋತ್ಪಾದಕ ದಾಳಿಯಲ್ಲಿ ಜೀವಹಾನಿಯಾದ ಭಾರತೀಯ ಜನರಿಗೆ ಶ್ರೀ ಅಲ್-ಥಾನಿ ಸಂತಾಪ ಮತ್ತು ಐಕಮತ್ಯವನ್ನು ವ್ಯಕ್ತಪಡಿಸಿದರು. ಭಯೋತ್ಪಾದನೆಯ ವಿರುದ್ಧ ಭಾರತದ ಹೋರಾಟ ಮತ್ತು ಅಪರಾಧಿಗಳನ್ನು ನ್ಯಾಯಕ್ಕೆ ತರಲು ಅದರ ಎಲ್ಲಾ ಕ್ರಮಗಳಿಗೆ ಕತಾರ್ ಅಮೀರ್ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದರು.
Any questions related to prajaprabhat?