ಕಪ್ಪು ಪಟ್ಟಿ ಧರಿಸಿ ಉಪನ್ಯಾಸಕರ ಪ್ರತಿಭಟನೆ
ಮಂಡ್ಯ.13.ಮಾರ್ಚ್.26: ಮಂಡ್ಯ ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಜಿಲ್ಲಾ ಉಪ ನಿರ್ದೇಶಕರ ಕಚೇರಿಗಳ ಮೇಲಿನ ಆಡಳಿತಾತ್ಮಕ ನಿಯಂತ್ರಣ ವಹಿಸಲು ಪ್ರಸ್ತಾಪಿತ ಸರ್ಕಾರದ ಕಡತ ಹಿಂಪಡೆಯಬೇಕು ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ನಗರದಲ್ಲಿ ಗುರುವಾರ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡಿದರು. ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕಾಲೇಜುಗಳ ಪ್ರಾಂಶುಪಾಲರ ಸಂಘದ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದ ಅವರ ಮೂಲಕ…
Any questions related to prajaprabhat?