ಶಿಕ್ಷಕರನ್ನು ಬೂತ್ ಮಟ್ಟದ ಅಧಿಕಾರಿಗಳನ್ನಾಗಿ ನೇಮಕ ಮಾಡುವ ಕುರಿತು ಮಾನ್ಯ ಸರ್ವೋಚ್ಚ ನ್ಯಾಯಾಲಯ ನೀಡಿರುವ ಆದೇಶ
ಬೆಂಗಳೂರು.04.ಜುಲೈ.25:- ರಾಜ್ಯದ ಶಾಲಾ ಶಿಕ್ಷಕರನ್ನು ಬೂತ್ ಮಟ್ಟದ ಅಧಿಕಾರಿಗಳನ್ನಾಗಿ ನಿಯೋಜನೆ ಮಾಡುವ ಕುರಿತು ಚುನಾವಣಾಧಿಕಾರಿಗಳು ಮಹತ್ವದ ಆದೇಶ ಹೊರಡಿಸಿದ್ದಾರೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಸರ್ಕಾರದ ಪ್ರಧಾನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಉಲ್ಲೇಖಿತ ಅರೇ ಸರ್ಕಾರಿ ಪತ್ರದಲ್ಲಿ ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಶಾಲೆಗಳ ವಿವಿಧ ಶಿಕ್ಷಕರನ್ನು ಚುನಾವಣಾ ಸಂಬಂಧಿತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ನಿಯೋಜಿಸಿರುವುದನ್ನು ಹಿಂಪಡೆಯಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನವನ್ನು ನೀಡುವಂತೆ ಕೋರಿರುತ್ತಾರೆ. ಶಿಕ್ಷಕರನ್ನು ಬೂತ್ ಮಟ್ಟದ ಅಧಿಕಾರಿಗಳನ್ನಾಗಿ ನೇಮಕ…