ಡಾ. ಫ.ಗು.ಹಳಕಟ್ಟಿ ವಚನಗಳ ರಕ್ಷಣೆಗೆ ಶ್ರಮಿಸಿದ್ದರು- ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ
ಕೊಪ್ಪಳ ಜುಲೈ 02 (ಕರ್ನಾಟಕ ವಾಕನ್ನಡ ಸಾಹಿತ್ಯದಲ್ಲಿ ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯಗಳಿಗೆ ಬಹಳ ವಿಶೇಷ ಸ್ಥಾನವಿದ್ದು, ಡಾ. ಫ.ಗು.ಹಳಕಟ್ಟಿಯವರು ವಚನಗಳ ರಕ್ಷಣೆಗೆ ಶ್ರಮಿಸಿದವರಾಗಿದ್ದರು ಎಂದು ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಹೇಳಿದರು. ಅವರು ಬುಧವಾರ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಡಾ. ಫ.ಗು.ಹಳಕಟ್ಟಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದಿನ ಜನ ಸಮುದಾಯಕ್ಕೆ ನಟ, ನಟಿಯರು ಆದರ್ಶ…