ಕಾನೂನು ಸೇವಾ ಪ್ರಾಧಿಕಾರದಿಂದ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0 ಅಭಿಯಾನ
ಕೊಪ್ಪಳ.26.ಡಿಸೆಂಬರ್.25: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ರಾಜ್ಯಾದ್ಯಂತ 2026ರ ಜನವರಿ 2 ರಿಂದ 90 ದಿನಗಳ ಕಾಲ ರಾಷ್ಟçಕ್ಕಾಗಿ ಮಧ್ಯಸ್ಥಿಕೆ 2.0 ಎಂಬ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಅಭಿಯಾನದಲ್ಲಿ ಕೊಪ್ಪಳ ಜಿಲ್ಲೆಯ ಎಲ್ಲಾ ತಾಲ್ಲೂಕು ಮತ್ತು ಜಿಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸಿಕೊಳ್ಳಬಹoದಾಗಿದೆ. ಸಾರ್ವಜನಿಕರು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಮೋಟಾರು ಅಪಘಾತ…
Any questions related to prajaprabhat?