|

BCA ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

ಹಾವೇರಿ.19.ಏಪ್ರಿಲ್.25:- ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ.ಇಲ್ಲಿನ ದಲಿತ ವಿದ್ಯಾರ್ಥಿನಿ ಸಾವು ಪ್ರಕರಣದಲ್ಲಿ ಇದೀಗ ಮುಸ್ಲಿಂ ಯುವಕನ ಮೇಲೆ ಆರೋಪ ಕೇಳಿ ಬಂದಿದೆ.

ಮುಸ್ಲಿಂ ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.

ಈ ಸಂಬಂಧ ನದಾಫ್ ನನ್ನು ಬಂಧಿಸುವಂತೆ ಆಗ್ರಹ ವ್ಯಕ್ತವಾಗಿದೆ.ಬಿಸಿಎ ಓದುತ್ತಿದ್ದ 22 ವರ್ಷದ ಶಿಲ್ಪಾ ಶಿಗ್ಗಾಂವಿಯ ನವೀನ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇನ್ನು ನವೀನ್ ಆರೋಪಿ ರಂಜಾನ್ ನದಾಫ್ನ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು.


ನವೀನ್ ವಿರುದ್ಧ ಕಳ್ಳತನ ಆರೋಪ ಮಾಡಿದ್ದ ನದಾಫ್, ನವೀನ್ ಮೊಬೈಲ್ ಅನ್ನು ಕಸಿದುಕೊಂಡಿದ್ದನು. ನಂತರ ರಂಜಾನ್ ನದಾಫ್, ನವೀನ್ ಮತ್ತು ಶಿಲ್ಪಾರ ಚಾಟ್ ಮೆಸೆಜ್ಗಳನ್ನು ನೋಡಿದ್ದು ಶಿಲ್ಪಾ ಮೊಬೈಲ್ ನಂಬರ್ ತೆಗೆದುಕೊಂಡು ಕಿರುಕುಳ ನೀಡಲು ಪ್ರಾರಂಭಿಸಿದ್ದಾನೆ.

ಹೀಗಾಗಿ ಶಿಲ್ಪಾ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗುತ್ತಿದೆ. ಕಳೆದ ವಾರ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Similar Posts

Leave a Reply

Your email address will not be published. Required fields are marked *