ಬೀದರ.06.ಏಪ್ರಿಲ್.25:-ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅಪರ ಜಿಲ್ಲಾ ಮತ್ತು ಸತ್ರ, ವಿಶೇಷ ನ್ಯಾಯಾಲಯ ಪೋಕ್ಸೋ ಕಾಯ್ದೆಯಡಿ 31 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ನಗರದ ಮೈಲೂರಿನ ಮೌನೇಶ್ವರ ದಶರಥ ಶಿಕ್ಷೆಗೆ ಒಳಗಾದ ಆರೋಪಿ.15 ವರ್ಷ 7 ತಿಂಗಳ ಅಪ್ರಾಪ್ತ ಬಾಲಕಿಗೆ ಪ್ರೀತಿಸಿ ಮದುವೆಯಾಗಿದ್ದ ಮೌನೇಶ್ವರ ನಿರಂತರ ಲೈಂಗಿಕ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ್ದ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪರವಾಗಿ ಮೈಲೂರ ಅಂಗನವಾಡಿ ಮೇಲ್ವಿಚಾರಕರು 2023ರ ಜು. 13ರಂದು ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಸಿಪಿಐ ವಿಜಯಕುಮಾರ ಅರ್.ಎನ್ ಅವರು ತನಿಖೆ ನಡೆಸಿ, ಆರೋಪಿ ವಿರುದ್ಧ ನ್ಯಾಯಾಲಯ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಸಚಿನ್ ಕೌಶಿಕ್ ಅವರು ಮೌನೇಶ್ವರ ವಿರುದ್ಧ ಆರೋಪ ಸಾಬೀತಾದ ಹಿನ್ನಲೆ ಪೋಕ್ಸೋ ಕಾಯ್ದೆಯಡಿ 30 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡದ ಮೊತ್ತ ಭರಿಸಲು ತಪ್ಪಿದ್ದಲ್ಲಿ ಮತ್ತೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದ್ದಾರೆ. ಜತೆಗೆ ಭಾರತೀಯ ದಂಡ ಸಂಹಿತೆ ಅಡಿ 3 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.