ರಾಜ್ಯಾದ್ಯಂತ ಖಾಲಿ ಇರುವ 16,000 ಶಿಕ್ಷಕರ ನೇಮಕಾತಿ : ಸಚಿವ ಮಧು ಬಂಗಾರಪ್ಪ ಘೋಷಣೆ
ರಾಜ್ಯದಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಅಂದಾಜು 17000 ಶಿಕ್ಷಕರ ನೇಮಕಾತಿಗೆ ಕ್ರಮವಹಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ. ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆ ಸಂದೇಶ ನೀಡಿದರು. ಈ ಜಿಲ್ಲೆ ಅನೇಕ ಹೋರಾಟಗಾರರಿಗೆ ಜನ್ಮ ನೀಡಿದೆ, ರಾಜ್ಯದ ರಾಜಕೀಯ ಕ್ಷೇತ್ರದಲ್ಲಿ ನಮ್ಮ ತಂದೆಯವರಾದ ಎಸ್. ಬಂಗಾರಪ್ಪ ನವರು ಸೇರಿದಂತೆ ನಾಲ್ಕು ಮುಖ್ಯ ಮಂತ್ರಿಗಳನ್ನು…

