ಉನ್ನತ ಶಿಕ್ಷಣ ಇಲಾಖೆಯ ಅತಿಥಿ ಉಪನ್ಯಾಸಕರ ನೇಮಕಾತಿಗೆ ಜಾತಿ ಮೀಸಲಾತಿ ಜಾರಿ !
ಬೆಂಗಳೂರು: ಕರ್ನಾಟಕ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಇದೇ ಮೊದಲ ಬಾರಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಜಾತಿ ಆಧಾರಿತ ಮೀಸಲಾತಿ ಜಾರಿಗೊಳಿಸಲಾಗಿದೆ. ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಒಳ ಮೀಸಲಾತಿಯೂ ಪ್ರಸ್ತುತ ವರ್ಷದಿಂದ ಜಾರಿಗೊಳಿಸಲಾಗಿದೆ. ಒಂದು ದಶಕದಿಂದ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಅಂಗವಿಕಲರು ಮತ್ತು ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತಿದ್ದು ಆದರೆ 2026-27ನೇ ಶೈಕ್ಷಣಿಕ ಸಾಲಿನಿಂದ ಕೇ.50ರ ಜಾತಿ ಮೀಸಲಾತಿ ಜಾರಿಗೆ ತರಲು ಉನ್ನತ ಶಿಕ್ಷಣ ಇಲಾಖೆ ಘೋಷಿಸಿದೆ….

