ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ
ಆಚರಿಸೋಣ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಬೀದರ, ಸೆಪ್ಟೆಂಬರ್.08 (ಕರ್ನಾಟಕ ವಾರ್ತೆ):- ಪ್ರತಿ ವರ್ಷದಂತೆ ಈ ವರ್ಷವು ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಎಲ್ಲರೂ ಸೇರಿ ಅರ್ಥಪೂರ್ಣವಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.ವಿವಿಧ ಇಲಾಖೆಯ ಅಧಿಕಾರಿಗಳಿಗೆ ವಹಿಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು. ಸೆಪ್ಟೆಂಬರ್ 17 ಬೆಳಿಗ್ಗೆ 7:45 ಗಂಟೆಗೆ ಎಲ್ಲಾ ಸರಕಾರಿ ಹಾಗೂ ಅರೆ ಸರಕಾರಿ ಕಛೇರಿ ಮತ್ತು…
Any questions related to prajaprabhat.com?