ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸೋಣ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಬೀದರ.07.ಆಗಸ್ಟ್.25:- ಪ್ರತಿ ವರ್ಷದಂತೆ ಈ ವರ್ಷವು ಆಗಸ್ಟ್.15 ರಂದು ಸ್ವಾತಂತ್ರ್ಯೊತ್ಸವ ದಿನಾಚರಣೆಯನ್ನು ಎಲ್ಲರೂ ಸೇರಿ ಅದ್ದೂರಿಯಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು. ಅವರು ಗುರುವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಸ್ವಾತಂತ್ರ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು. ವಿವಿಧ ಇಲಾಖೆಯ ಅಧಿಕಾರಿಗಳಿಗೆ ವಹಿಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಮತ್ತು ತಾವು ತೈಯಾರಿ ಮಾಡಿಕೊಂಡ ಮಾಹಿತಿಯನ್ನು ನೀಡಬೇಕು ಹಾಗೂ ಧ್ವಜಾರೋಹಣ ಸಂದರ್ಭದಲ್ಲಿ ಎಲ್ಲೂ ಧ್ಜಜ ತಲೆ ಕೆಳಗಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು. ಆಗಸ್ಟ್.15 ರಂದು ಬೆಳಿಗ್ಗೆ…
Any questions related to prajaprabhat.com?