ವಿಕಲಚೇತನ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ,
ಮೆಟ್ರಿಕ್ ನಂತರದ ಸ್ಕಾಲರ್ಶಿಪ್ಗೆ ಅರ್ಜಿ ಆಹ್ವಾನ
ಬೀದರ.09.ಜುಲೈ.25:- 2025-26ನೇ ಸಾಲಿನಲ್ಲಿ ಎಸ್ಎಸ್ಪಿ ವಿದ್ಯಾರ್ಥಿವೇತನ ಯೋಜನೆಯಡಿ ವಿಕಲಚೇತನರ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಪಡೆಯಲು ಪ್ರೀ-ಮೆಟ್ರಿಕ್ ಮತ್ತು ಪೋಸ್ಟ್-ಮೆಟ್ರಿಕ್ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಬೀದರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಹ ವಿಕಲಚೇತನ ವಿದ್ಯಾರ್ಥಿಗಳು ವೆಬ್ಸೈಟ್ https://ssp.postmatric.karnataka.gov.in/2223_Processing/LoginPageನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಒಂದು ಪ್ರತಿಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮೈಲೂರ ಬೀದರ ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:…
Any questions related to prajaprabhat.com?