ಕೊಪ್ಪಳ ನಗರಸಭೆ: ಹಿಂದುಳಿದ ವರ್ಗದವರಿಗೆ ಶಸ್ತ್ರಚಿಕಿತ್ಸೆಗೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ.13.ಜೂನ್.26: ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಹಿಂದುಳಿದ ವರ್ಗದ (ಒಬಿಸಿ) ಸಾರ್ವಜನಿಕರಿಗೆ ವೈದ್ಯಕೀಯ ಶಸ್ತ್ರಚಿಕಿತ್ಸೆಗಾಗಿ ಆರ್ಥಿಕ ನೆರವು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಗರಸಭೆಯ 2026-27ನೇ ಸಾಲಿನ ಶೇ.7.25ರ ಯೋಜನೆಯಡಿ ಎಸ್.ಎಫ್.ಸಿ ಮುಕ್ತನಿಧಿ ಅನುದಾನದ ಒಟ್ಟು ಮೊತ್ತದಲ್ಲಿ ಶೇ.40ರಷ್ಟು ಹಣವನ್ನು ಹಿಂದುಳಿದ ವರ್ಗದ ಜನರ ವೈಯಕ್ತಿಕ ಕಾರ್ಯಕ್ರಮಗಳಿಗೆ ಮೀಸಲಿರಿಸಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿಯ ಆದೇಶದ ಅನ್ವಯ ಈ ಯೋಜನೆ ಜಾರಿಗೊಳಿಸಲಾಗಿದ್ದು, ಅರ್ಹ ಫಲಾನುಭವಿಗಳಿಗೆ ಶಸ್ತ್ರಚಿಕಿತ್ಸೆ ವೆಚ್ಚಕ್ಕೆ ಧನಸಹಾಯ ನೀಡಲಾಗುತ್ತದೆ. ಆಸಕ್ತ ಹಾಗೂ ಅರ್ಹ ಫಲಾನುಭವಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ…
Any questions related to prajaprabhat.com?