ಭಾಲ್ಕಿ: ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಅರ್ಜಿ ಆಹ್ವಾನ
ಬೀದರ.04.ಜೂನ್.25:- 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವವಿದ್ಯಾರ್ಥಿಗಳಿಗೆ (5ರಿಂದ 10ನೇ ತರಗತಿ) (ರಾಜ್ಯ ವಿದ್ಯಾರ್ಥಿನಿಲಯತಂತ್ರಾಶ) ಮೂಲಕ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ ಎಂದು ಭಾಲ್ಕಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ. 2.50 ಲಕ್ಷ ರೂ., ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ 1.00 ಲಕ್ಷ ರೂ. ಇದ್ದಿರುತ್ತದೆ….
Any questions related to prajaprabhat.com?