DHFWS ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ’ದಲ್ಲಿ ಉದ್ಯೋಗವಕಾಶ….

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಯಾದಗಿರಿಯು ಅಧಿಕೃತ ಅಧಿಸೂಚನೆಯ ಮೂಲಕ ಕೀಟ ಸಂಗ್ರಾಹಕ, ಸ್ವಯಂಸೇವಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ವಿಶೇಷವಾಗಿ ನೀವು ಯಾದಗಿರಿಯಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಜೂನ್ 09 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.

DHFWS ಯಾದಗಿರಿ ಹುದ್ದೆಯ ಅಧಿಸೂಚನೆ:

ಸಂಸ್ಥೆಯ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಯಾದಗಿರಿ ( DHFWS )
ಹುದ್ದೆಗಳ ಸಂಖ್ಯೆ: 21
ಉದ್ಯೋಗ ಸ್ಥಳ: ಯಾದಗಿರಿ – ಕರ್ನಾಟಕ
ಹುದ್ದೆ ಹೆಸರು: ಕೀಟ ಸಂಗ್ರಾಹಕ, ಸ್ವಯಂಸೇವಕರು
ಸಂಬಳ: ತಿಂಗಳಿಗೆ ರೂ.15114/-
ಕರ್ನಾಟಕದಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಈ ಕೆಳಗಿನ ಸ್ಥಳದಲ್ಲಿ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗಣ, ಯಾದಗಿರಿ.

ಕೀಟ ಸಂಗ್ರಾಹಕ ಹುದ್ದೆಯ ಕರ್ತವ್ಯಗಳು, ನಿಬಂಧನೆಗಳು:

ನಗರ/ಗ್ರಾಮೀಣ ಪ್ರದೇಶಗಳಲ್ಲಿ ಸೊಳ್ಳೆ/ಕೀಟಗಳ ಸಂಗ್ರಹಣೆಗಾಗಿ ಮುಂಜಾನೆ 05:00 ಗಂಟೆ ಹಾಗೂ ರಾತ್ರಿ 08:00ರ ಸಮಯದಲ್ಲಿ ಕಾರ್ಯನಿರ್ವಹಿಸುವುದು, ಸಂದರ್ಭಕ್ಕೆ ಅನುಸಾರವಾಗಿ ವಾಸ್ತವ್ಯವಾಗಿರಬೇಕು.
ತಿಂಗಳಲ್ಲಿ ಕನಿಷ್ಠ 16ದಿನ ಪ್ರವಾಸ ಮಾಡುವುದು ಕಡ್ಡಾಯವಾಗಿರುತ್ತದೆ. ಹೆಚ್ಚಿನ ವಿವರಗಳನ್ನು ಕಛೇರಿಯಲ್ಲಿ ಪಡೆಯಬಹುದಾಗಿದೆ.
ಕಂಪ್ಯೂಟರ್ ನಿರ್ವಹಣೆಯ ಜ್ಞಾನ ಹೊಂದಿರಬೇಕು.
ಸದರಿ ಹುದ್ದೆಯು ಗುತ್ತಿಗೆ ಅವಧಿಗೆ ಸೀಮಿತವಾಗಿದ್ದು ಖಾಯಂ ಎಂದು ಪರಿಗಣಿಸುವುದಿಲ್ಲ.
ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದವರಿಗೆ ಆದ್ಯತೆ ನೀಡಲಾಗುವುದು.
ಕೀಟ ಸಂಗ್ರಾಹಕ ಹುದ್ದೆಗಾಗಿ 100ದಿನಗಳ ಅವಧಿಗೆ ಸೂಕ್ತ ಹಾಗೂ ಸ್ಥಳೀಯ ಅಭ್ಯರ್ಥಿಗಳಿಗೆ ನೇರ ಸಂದರ್ಶವನ್ನು ಕರೆಯಲಾಗಿದ್ದು ಆಸಕ್ತಿಉಳ್ಳವ ಅಭ್ಯರ್ಥಿಗಳು (ಪ್ರತಿ ದಿನ ಗೌರವಧನ 400/-) ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿಗಳ ಸಭಾಂಗಣದಲ್ಲಿ ದಿನಾಂಕ:04.06.2025ರ ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 05:00 ರೊಳಗಾಗಿ ನೇರ ಸಂದರ್ಶನದ (Walk In Interview) ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

4 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

4 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

4 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

4 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

4 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

4 hours ago