|

Free ಉಚಿತ ‘ಮೊಬೈಲ್ ರಿಪೇರಿ’ ತರಬೇತಿಗಾಗಿ ಅರ್ಜಿ ಆಹ್ವಾನ

ರಾಜ್ಯದ ಯುವಕರಿಂದ ಶುಭ ಸುಧಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವಕರಿಂದ  ಮೊಬೈಲ್ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಸೆಪ್ಟೆಂಬರ್ 01 ರಿಂದ ಪ್ರಾರಂಭ ವಾಗಲಿದೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ವಯಸು:

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ ಅನ್ನು ಕಡ್ಡಾಯವಾಗಿ ಹೊಂದಿರಬೇಕು.

ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ :

ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ

ಮೊಬೈಲ್‌ ಸಂಖ್ಯೆ:

9481506564, 9380162042, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಶಾಖೆ, ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Similar Posts

Leave a Reply

Your email address will not be published. Required fields are marked *