|

FREE KAS.IAS ತರಬೇತಿಗೆ ಅರ್ಜಿ ಆಹ್ವಾನ.!

ಬೆಂಗಳೂರು.22.ಆಗಸ್ಟ್.25:- ಪ್ರಸಕ್ತ 2025-26 ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ UPSC ಯುಪಿಎಸ್‍ಸಿ/ KPSC ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ವಸತಿಯುತ ತರಬೇತಿಯನ್ನು ಬೆಂಗಳೂರಿನ ಹಜ್ ಭವನದಲ್ಲಿ ಹಾಗೂ ಕೆಪಿಎಸ್‍ಸಿ ಗ್ರೂಪ್-‘ಸಿ’, ಆರ್‍ಆರ್‍ಬಿ ಮತ್ತು ಎಸ್‍ಎಸ್‍ಸಿ ಪರೀಕ್ಷಾ ಪೂರ್ವ ತರಬೇತಿಯನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ನೀಡಲಾಗುವದು.

ಈ ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

https://sevasindhu.karnataka.gov.in/…/DepartmentServices ಅಡಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹಾಗೂ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಭರ್ತಿ ಮಾಡಲು ವಿವರವಾದ ಸೂಚನೆಗಳು/ ವಿಧಾನಗಳು https://dom.karnataka.gov.in ನಲ್ಲಿ ಲಭ್ಯವಿದೆ.

ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು, (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ), ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ ಹೊಂದಿರಬೇಕು.

ಅಭ್ಯರ್ಥಿಯ ವಯೋಮಿತಿ: ಯುಪಿಎಸ್‍ಸಿ/ ಕೆಎಎಸ್ ಗೆಜೆಟೆಡ್ ಪ್ರೊಬೇಷನರ್, ಕೆಪಿಎಸ್‍ಸಿ ಗ್ರೂಪ್-‘ಸಿ’ ತರಬೇತಿಗೆ ಕನಿಷ್ಠ 21 ಹಾಗೂ ಗರಿಷ್ಟ 35 ವರ್ಷಗಳು ಮತ್ತು ಆರ್‍ಆರ್‍ಬಿ ಮತ್ತು ಎಸ್‍ಎಸ್‍ಸಿ ತರಬೇತಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಟ 30 ವರ್ಷಗಳು ಮೀರಿರಬಾರದು. (ಅರ್ಜಿ ಸಲ್ಲಿಸುವ ಅಂತಿಮ ದಿನಾಂಕದೊಳಗೆ), ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ. ಹಿಂದಿನ ಸಾಲಿನಲ್ಲಿ ಐಎಎಸ್/ಕೆಎಎಸ್ ತರಬೇತಿ ಪಡೆದ ಅಭ್ಯರ್ಥಿಗಳು ಅರ್ಹರಿರುವುದಿಲ್ಲ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಆಗಸ್ಟ್, 26 ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ: 8277799990 ಇವರನ್ನು ಸಂಪರ್ಕಿಸಬಹುದು.

Similar Posts

Leave a Reply

Your email address will not be published. Required fields are marked *